HD Kumaraswamy; ಗ್ಯಾರಂಟಿಗಳ ಜಾರಿಗೆ ಹಣ ಹೊಂದಿಸುವುದು ಕಷ್ಟದ ಕೆಲಸವೇನಲ್ಲ: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Jun 12, 2023 | 7:21 PM

ತಾವು ಮುಖ್ಯಮಂತ್ರಿಯಾಗಿ ಕೆಲಸ ಮಾಡಿರುವ ಅನುಭವದ ಹಿನ್ನೆಲೆಯಲ್ಲಿ ಇದನ್ನು ಹೇಳಿತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹೇಳಿದರು.

ರಾಮನಗರ: ಫಾರ್ ಎ ಚೇಂಜ್ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಸಿದ್ದರಾಮಯ್ಯ ಸರ್ಕಾರ (Siddaramaiah government) ಮತ್ತು ಅದು ಘೋಷಿಸಿದ 5 ಗ್ಯಾರಂಟಿಗಳ (5 Guarantees) ಪರ ಬ್ಯಾಟ್ ಮಾಡಿದ್ದಾರೆ. ತಮ್ಮ ಕ್ಷೇತ್ರ ಚನ್ನಪಟ್ಟಣದಲ್ಲಿ ಇಂದು ಸುದ್ದಿಗೋಷ್ಟಿ ಉದ್ದೇಶಿಸಿ ಮಾತಾಡಿದ ಅವರು 5 ಗ್ಯಾರಂಟಿಗಳನ್ನು ಈಡೇರಿಸಲು ಹಣ ಹೊಂದಿಸಲು ಸಾಧ್ಯವಾಗದು ಅಂತ ಬಿಜೆಪಿ ಹೇಳುತ್ತಿರುವುದನ್ನು ಲೇವಡಿ ಮಾಡಿದರು. ಸರ್ಕಾರ ಮನಸ್ಸು ಮಾಡಿದರೆ, ಗ್ಯಾರಂಟಿಗಳಿಗೆ ಹಣ ಹೊಂದಿಸುವುದು ಕಷ್ಟವಾಗಲಾರದು, ಅದಕ್ಕೆ ಹಲವು ಮಾರ್ಗೋಪಾಯಗಳಿವೆ ಎಂದು ಕುಮಾರಸ್ವಾಮಿ ಹೇಳಿದರು. ತಾವು ಮುಖ್ಯಮಂತ್ರಿಯಾಗಿ ಕೆಲಸ ಮಾಡಿರುವ ಅನುಭವದ ಹಿನ್ನೆಲೆಯಲ್ಲಿ ಇದನ್ನು ಹೇಳಿತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

 

 

 

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.