AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ್​ಗೆ ಮತ್ತೊಂದು ಪ್ರಕರಣದಲ್ಲಿ ಸಂಕಷ್ಟ: ದಾಖಲಾಯ್ತು ದೂರು

ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ್​ಗೆ ಮತ್ತೊಂದು ಪ್ರಕರಣದಲ್ಲಿ ಸಂಕಷ್ಟ: ದಾಖಲಾಯ್ತು ದೂರು

ರಾಮ್​, ಮೈಸೂರು
| Edited By: |

Updated on: Sep 22, 2026 | 12:53 PM

Share

ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ಧನಂಜಯ್ ಅವರು ಪ್ರಭಾವ ಬಳಸಿ ತಮ್ಮ ವರ್ಗಾವಣೆ ಆದೇಶವನ್ನು ಒಂದೇ ದಿನದಲ್ಲಿ ರದ್ದುಪಡಿಸಿ ಅದೇ ಠಾಣೆಯಲ್ಲಿ ಮುಂದುವರೆದಿದ್ದಾರೆ ಎಂದು ಆರೋಪಿಸಲಾಗಿದೆ. ಸಮಾಜದಲ್ಲಿ ಅಶಾಂತಿ ಮತ್ತು ಧರ್ಮಗಳ ನಡುವೆ ದ್ವೇಷ ಮೂಡಿಸುವಂತಹ ಮಾತುಗಳನ್ನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಸೂಕ್ತ ಕಾನೂನು ಕ್ರಮಕ್ಕೆ ಮನವಿ ಮಾಡಲಾಗಿದೆ.

ಮೈಸೂರು, ಸೆಪ್ಟೆಂಬರ್ 22: ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿವಾದದಿಂದ ಸುದ್ದಿಯಾಗಿರುವ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ತಮ್ಮ ವರ್ಗಾವಣೆ ಆದೇಶವನ್ನು ರದ್ದುಪಡಿಸಲು ಧನಂಜಯ್ ಅವರು ಪ್ರಭಾವ ಬಳಸಿದ್ದಾರೆ ಎಂಬುದು ದೂರಿನ ಪ್ರಮುಖ ಅಂಶವಾಗಿದೆ. ವರ್ಗಾವಣೆ ಆದೇಶವನ್ನು ಒಂದೇ ದಿನದಲ್ಲಿ ರದ್ದುಗೊಳಿಸಿ, ಅದೇ ಠಾಣೆಯಲ್ಲಿ ಮುಂದುವರೆದಿರುವ ಬಗ್ಗೆ ಆರೋಪಿಸಲಾಗಿದೆ. ಈ ಹಿಂದೆ ಗಣಪತಿ ಮೆರವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ಧಮ್ಕಿ ಹಾಕಿರುವ ಆಕ್ಷೇಪಗಳು ಕೇಳಿ ಬಂದಿದ್ದು ದೊಡ್ಡ ಮಟ್ಟದ ಸಂಚಲನ ಮೂಡಿಸಿತ್ತು. ಈಗ ಸ್ನೇಹಮಯಿ ದೂರಿನಲ್ಲಿ ಕೂಡ, ಇನ್ಸ್‌ಪೆಕ್ಟರ್ ಧನಂಜಯ್ ಸಮಾಜದಲ್ಲಿ ಅಶಾಂತಿಗೆ ಕಾರಣರಾಗಿದ್ದಾರೆ ಮತ್ತು ಧರ್ಮಗಳ ನಡುವೆ ದ್ವೇಷ ಮೂಡಿಸುವಂತೆ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ಮೊಕದ್ದಮೆ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ದೂರುದಾರ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More