ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ಟಿ.ನರಸೀಪುರದಲ್ಲಿ ಗಣೇಶ ಮೆರವಣಿಗೆ ಮಸೀದಿ ಎದುರೇ ಸಾಗಿದ್ದು, ಪಟಾಕಿ ಸಿಡಿಸಿ ಸಂಭ್ರಮಾಚರಿಸಲಾಗಿದೆ. ಮೆರವಣಿಗೆ ಹೋಗದಂತೆ ಹಾಗೂ ಪಟಾಕಿ ಸಿಡಿಸದಂತೆ ಇನ್ಸ್‌ಪೆಕ್ಟರ್ ಧನಂಜಯ್ ಎಚ್ಚರಿಕೆ ನೀಡಿದ್ದರ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧನಂಜಯ್ ಅವರನ್ನು ಅಯೋಗ್ಯ ಎಂದು ಏಕವಚನದಲ್ಲಿ ನಿಂದಿಸಿ, ಭವಿಷ್ಯದಲ್ಲಿ ಲೆಕ್ಕ ಚುಕ್ತ ಮಾಡುವ ಎಚ್ಚರಿಕೆ ನೀಡಿದ್ದಾರೆ.
ಮೈಸೂರು, ಸೆಪ್ಟೆಂಬರ್ 19: ಟಿ.ನರಸೀಪುರದಲ್ಲಿ ಗಣೇಶ ಮೆರವಣಿಗೆ ಮಸೀದಿ ಮುಂದೆಯೇ ಸಾಗಿದ್ದು, ಮಸೀದಿ ಬಳಿಯೇ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಗಿದೆ. ಇನ್ಸ್‌ಪೆಕ್ಟರ್ ಧನಂಜಯ್ ಅವರ ಪೂರ್ವ ಎಚ್ಚರಿಕೆಯ ಹೊರತಾಗಿಯೂ ಮೆರವಣಿಗೆ ಸಾಗಿದೆ. ಈ ಮೊದಲು ಶಾಂತಿ ಸಭೆಯಲ್ಲಿ ಇನ್ಸ್‌ಪೆಕ್ಟರ್ ಧನಂಜಯ್ ಅವರು ಮಸೀದಿ ಮುಂದೆ ಮೆರವಣಿಗೆ ಹೋಗಬಾರದು ಮತ್ತು ಪಟಾಕಿ ಸಿಡಿಸಬಾರದು ಎಂದು ಎಚ್ಚರಿಕೆ ನೀಡಿದ್ದರು. ಆದರೆ ಯುವಕರ ತಂಡ ಇದನ್ನು ಸವಾಲಾಗಿ ಸ್ವೀಕರಿಸಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ ನಡೆಸಿದೆ.
ಈ ಸಂದರ್ಭದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಧನಂಜಯ್ ಅವರನ್ನು ‘ಅಯೋಗ್ಯ’ ಎಂದು ಏಕವಚನದಲ್ಲಿ ನಿಂದಿಸಿ, ಪೊಲೀಸ್ ಇಲಾಖೆಯ ಬಗ್ಗೆ ಗೌರವವಿದ್ದರೂ, ಧನಂಜಯ್ ಅವರಂತಹ ಅಧಿಕಾರಿಗಳ ಬಗ್ಗೆ ಗೌರವವಿಲ್ಲ ಎಂದು ಹೇಳಿದ್ದಾರೆ. ಒಂದೂವರೆ ವರ್ಷದ ನಂತರ ತಾವು ಅಧಿಕಾರಕ್ಕೆ ಬಂದಾಗ ಧನಂಜಯ್ ಅವರ ‘ಲೆಕ್ಕ ಚುಕ್ತ’ ಮಾಡುವುದಾಗಿ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

