AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ.ನರಸೀಪುರ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು

ಟಿ.ನರಸೀಪುರ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು

ರಾಮ್​, ಮೈಸೂರು
| Edited By: |

Updated on: Sep 19, 2026 | 9:39 PM

Share

ಮೈಸೂರು ಜಿಲ್ಲೆಯ ಟಿ ನರಸೀಪುರ ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು ಹೊಡೆದ ಹಿಂದೂ ಮಹಾಸಭಾ ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಮಾಜಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಶುಕ್ರವಾರ ಗಣೇಶ ಶೋಭಾಯಾತ್ರೆ ನಡೆಸಿದೆ. ಅಲ್ಲದೇ ಶೋಭಾಯಾತ್ರೆ ವೇಲೆ ಮಾಜಿ ಸಂಸದ ಪ್ರತಾಪ್ ಸಿಂಹ ಮೈಕ್​​ನಲ್ಲಿ ಇನ್ಸ್​​ಪೆಕ್ಟರ್ ವಿರುದ್ಧ ಏಕವಚನದಲ್ಲೇ ಬೈದಿದ್ದಾರೆ. ಇದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.

ಮೈಸೂರು, (ಸೆಪ್ಟೆಂಬರ್ 19): ಟಿ ನರಸೀಪುರ ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿ ಪ್ರಕರಣ ರಾಜೀಯ ಸ್ವರೂಪ ಪಡೆದುಕೊಂಡಿದ್ದು, ಅಂತ್ಯವಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇನ್ಸ್​ಙಪೆಕ್ಟರ್ ಧಮ್ಕಿಯನ್ನು ಸವಾಲಾಗಿ ಸ್ವೀಕರಿಸಿದ್ದ ಹಿಂದೂ ಸಂಘಟನೆಗಳು ನಿನ್ನೆ (ಸೆಪ್ಟೆಂಬರ್ 18) ಅದ್ಧೂರಿಯಾಗಿ ಗಣೇಶ ಮೂರ್ತಿ ಶೋಭಾಯಾತ್ರೆ ಮಾಡಿ ತೋರಿಸಿವೆ. ಆದ್ರೆ, ಈ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಗ, ಇನ್ಸ್​ಪೆಕ್ಟರ್​​ಗೆ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದು, ಇದನ್ನು ಕಾಂಗ್ರೆಸ್ ಖಂಡಿಸಿದೆ. ಅಲ್ಲದೇ ಈ ಬಗ್ಗೆ ಮೈಸೂರು ಎಸ್ಪಿ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿಗೆ ದೂರು ನೀಡಿದೆ. ಮೆರವಣಿಗೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಹಲವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ನಿಗದಿತ ಸಮಯಕ್ಕಿಂತ ಹೆಚ್ಚು ಮೆರವಣಿಗೆ ನಡೆಸಿದ್ದಾರೆ. ಈ ಬಗ್ಗೆ ಎಫ್‌ಐಆರ್ ದಾಖಲಿಸುವಂತೆ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us