AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ ನರಸೀಪುರದಲ್ಲಿ ಸಂವಿಧಾನ ಸೌಹಾರ್ದ ರಥಯಾತ್ರೆ, ಮಹಾಗಣಪತಿ ಶೋಭಾಯಾತ್ರೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಟಿ ನರಸೀಪುರದಲ್ಲಿ ಸಂವಿಧಾನ ಸೌಹಾರ್ದ ರಥಯಾತ್ರೆ, ಮಹಾಗಣಪತಿ ಶೋಭಾಯಾತ್ರೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ರಾಮ್​, ಮೈಸೂರು
| Edited By: |

Updated on: Sep 18, 2026 | 12:04 PM

Share

ಟಿ. ನರಸೀಪುರ ಪೊಲೀಸ್ ಧಮ್ಕಿ ಪ್ರಕರಣ: ಸಂವಿಧಾನ ಸೌಹಾರ್ದ ರಥಯಾತ್ರೆ ಹಾಗೂ ಮಹಾಗಣಪತಿ ಶೋಭಾಯಾತ್ರೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಅನಗತ್ಯ ಗೊಂದಲ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮೈಸೂರು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಕೆ ನೀಡಿದ್ದಾರೆ.

ಮೈಸೂರು, ಸೆಪ್ಟೆಂಬರ್ 18: ಮೈಸೂರು ಜಿಲ್ಲೆ ಟಿ. ನರಸೀಪುರದಲ್ಲಿ ಸಂವಿಧಾನ ಸೌಹಾರ್ದ ರಥಯಾತ್ರೆ ಹಾಗೂ ಮಹಾಗಣಪತಿ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎರಡೂ ಮೆರವಣಿಗೆಗಳು ಶಾಂತಿಯುತವಾಗಿ ನಡೆಯುವಂತೆ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮೈಸೂರು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ‘ಟಿವಿ9’ ಜತೆ ಮಾತನಾಡಿದ ಎಸ್‌ಪಿ ಬಾಲದಂಡಿ, ಅನಗತ್ಯ ಗೊಂದಲ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಎರಡೂ ಮೆರವಣಿಗೆಗಳ ಆಯೋಜಕರು ಹಾಗೂ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿದ್ದು, ಶಾಂತಿಯುತವಾಗಿ ಮೆರವಣಿಗೆ ನಡೆಸುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಭದ್ರತಾ ವ್ಯವಸ್ಥೆಗಾಗಿ ಟಿ. ನರಸೀಪುರದಲ್ಲಿ 600ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಶೋಭಾಯಾತ್ರೆ ಸಾಗುವ ಮಾರ್ಗಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿಗಾ ಇರಿಸಲಾಗುತ್ತದೆ. ಜೊತೆಗೆ ನಾಲ್ಕು ಡಿಎಆರ್ ಹಾಗೂ ನಾಲ್ಕು ಕೆಎಸ್‌ಆರ್‌ಪಿ ತುಕಡಿಗಳನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಲಿದ್ದಾರೆ. ಸಾರ್ವಜನಿಕರು ಶಾಂತಿ ಕಾಪಾಡುವಂತೆ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಎಸ್‌ಪಿ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us