RCB ಆಟಗಾರನ ಸಿಡಿಲಬ್ಬರಕ್ಕೆ ಎದುರಾಳಿ ಪಡೆ ತತ್ತರ
T20 Blast 2025: ಕೇವಲ 45 ಎಸೆತಗಳಲ್ಲಿ ಅಜೇಯ 85 ರನ್ಗಳಿಸುವ ಮೂಲಕ ಲಿಯಾಮ್ ಲಿವಿಂಗ್ಸ್ಟೋನ್ 18 ಓವರ್ಗಳಲ್ಲಿ ಗುರಿ ಮುಟ್ಟಿಸಿ ಲಂಕಾಶೈರ್ ತಂಡಕ್ಕೆ 3 ವಿಕೆಟ್ಗಳ ರೋಚಕ ಗೆಲುವು ತಂದುಕೊಟ್ಟರು. ಈ ಭರ್ಜರಿ ಪ್ರದರ್ಶನದೊಂದಿಗೆ ಲಿವಿಂಗ್ಸ್ಟೋನ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್ನ ಮೂರನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಲಂಕಾಶೈರ್ ತಂಡವು ರೋಚಕ ಜಯ ಸಾಧಿಸಿದೆ. ಈ ರೋಚಕ ಜಯದ ರೂವಾರಿ ಲಿಯಾಮ್ ಲಿವಿಂಗ್ಸ್ಟೋನ್. ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಲಂಕಾಶೈರ್ ಹಾಗೂ ಕೆಂಟ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಂಟ್ ತಂಡದ ನಾಯಕ ಸ್ಯಾಮ್ ಬಿಲ್ಲಿಂಗ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೆಂಟ್ ತಂಡವು 20 ಓವರ್ಗಳಲ್ಲಿ 153 ರನ್ ಕಲೆಹಾಕಿದ್ದರು.
154 ರನ್ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಲಂಕಾಶೈರ್ ತಂಡವು ಕೇವಲ 31 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ಲಿಯಾಮ್ ಲಿವಿಂಗ್ಸ್ಟೋನ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು.
ಒಂದೆಡೆ ಲಂಕಾಶೈರ್ ವಿಕೆಟ್ ಕಳೆದುಕೊಳ್ಳುತ್ತಿದ್ದರೆ, ಮತ್ತೊಂದೆಡೆ ಲಿವಿಂಗ್ಸ್ಟೋನ್ ಆಕ್ರಮಣಕಾರಿ ಬ್ಯಾಟಿಂಗ್ನೊಂದಿಗೆ ಅಬ್ಬರಿಸಿದರು. ಪರಿಣಾಮ ಲಿವಿಂಗ್ಸ್ಟೋನ್ ಬ್ಯಾಟ್ನಿಂದ 7 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳು ಮೂಡಿಬಂದವು.
ಅಲ್ಲದೆ ಕೇವಲ 45 ಎಸೆತಗಳಲ್ಲಿ ಅಜೇಯ 85 ರನ್ಗಳಿಸುವ ಮೂಲಕ ಲಿಯಾಮ್ ಲಿವಿಂಗ್ಸ್ಟೋನ್ 18 ಓವರ್ಗಳಲ್ಲಿ ಗುರಿ ಮುಟ್ಟಿಸಿ ಲಂಕಾಶೈರ್ ತಂಡಕ್ಕೆ 3 ವಿಕೆಟ್ಗಳ ರೋಚಕ ಗೆಲುವು ತಂದುಕೊಟ್ಟರು. ಈ ಭರ್ಜರಿ ಪ್ರದರ್ಶನದೊಂದಿಗೆ ಲಿವಿಂಗ್ಸ್ಟೋನ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ಅಂದಹಾಗೆ ಲಿಯಾಮ್ ಲಿವಿಂಗ್ಸ್ಟೋನ್ ಐಪಿಎಲ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಪರ ಕಣಕ್ಕಿಳಿದಿದ್ದರು. ಈ ವೇಳೆ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಇದೀಗ ಭರ್ಜರಿ ಪ್ರದರ್ಶನದೊಂದಿಗೆ ಎಲ್ಲರ ಗಮನ ಸೆಳೆದಿದ್ದಾರೆ.

