ಟಿ20 ವಿಶ್ವಕಪ್ ಸಂಭ್ರಮಾಚರಣೆ: ಐಟಿಸಿ ಮೌರ್ಯ ಹೋಟೆಲ್ನಲ್ಲಿ ಕೇಕ್ ಕತ್ತರಿಸಿದ ರಾಹುಲ್ ದ್ರಾವಿಡ್
T20 World Cup: ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಬಂದಿರುವ ಟೀಮ್ ಇಂಡಿಯಾಕ್ಕೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಇದೀಗ ಟೀಮ್ ಇಂಡಿಯಾ ದೆಹಲಿಗೆ ತಲುಪಿದ್ದು, ದೆಹಲಿ ಐಟಿಸಿ ಮೌರ್ಯ ಹೋಟೆಲ್ನಲ್ಲಿ ಸಂಭ್ರಮಾಚರಣೆ ಆರಂಭವಾಗಿದೆ. ರಾಹುಲ್ ದ್ರಾವಿಡ್ ಕೇಕ್ ಕತ್ತರಿಸುವ ಮೂಲಕ ಸಂಭ್ರಮವನ್ನು ಹೆಚ್ಚಿಸಿದ್ದಾರೆ. ಈ ಬಗ್ಗೆ ವಿಡಿಯೋ ಇಲ್ಲಿದೆ.
ದೆಹಲಿ, ಜು.4: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವಿಜಯ ಸಾಧಿಸಿದ ಭಾರತ ತಂಡ ವಿಶ್ವಕಪ್ನೊಂದಿಗೆ ಭಾರತಕ್ಕೆ ಬಂದಿದೆ. ಬಾರ್ಬಡೋಸ್‌ನಿಂದ ದೆಹಲಿಗೆ ಇಂದು ಆಗಮಿಸಿದೆ. ಇದೀಗ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ರೋಜರ್ ಬಿನ್ನಿ ಅವರು ದೆಹಲಿಯ ಐಟಿಸಿ ಮೌರ್ಯ ಹೋಟೆಲ್ನಲ್ಲಿ ವಿಶ್ವ ಕಪ್ ಗೆದ್ದ ಖುಷಿಗೆ ಭಾರತ ತಂಡದ ಜತೆಗೆ ಕೇಕ್ ಕತ್ತರಿಸುವ ಮೂಲಕ ಸಂಭ್ರಮಾಚರಣೆ ಮಾಡಿಕೊಂಡಿದ್ದಾರೆ. ನಂತರ ಭಾರತ ತಂಡವು 12.00ಗಂಟೆಗೆ ಪ್ರಧಾನಿ ಮೋದಿ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಈ ಸಂಭ್ರಮದಲ್ಲಿ ವಿರಾಟ್, ರೋಹಿತ್, ಹಾರ್ದಿಕ್ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾಗವಹಿಸಿದ್ದಾರೆ. ಕೋಚ್ ರಾಹುಲ್ ದ್ರಾವಿಡ್ ಕೇಕ್ ಕಟ್ ಮಾಡುವ ಮೂಲಕ ಇಂಡಿಯಾ ತಂಡದ ಸಂಭ್ರಮವನ್ನು ಹೆಚ್ಚಿಸಿದ್ದಾರೆ. ಇನ್ನು ಇಂದು ಸಂಜೆ 5 ಗಂಟೆಗೆ ಮುಂಬೈನಲ್ಲಿ ಮರೈನ್ ಡ್ರೈವ್ ಮತ್ತು ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಮಾಡಲಿದ್ದಾರೆ. ಭಾರತ ಶನಿವಾರದಂದು ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿ, ವಿಜಯವನ್ನು ಸಾಧಿಸಿತ್ತು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ