T20 World Cup: ಶಾಂಪೆನ್ ಬಾಟಲ್ ಓಪನ್ ಮಾಡಿ ಸಂಭ್ರಮಿಸಿದ ನಾಯಕ ರೋಹಿತ್
ಟಿ20 ವಿಶ್ವಕಪ್ನಲ್ಲಿ ಭಾರತ ತಂಡ ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಆಗಿದೆ. ಬಾರ್ಬಡೋಸ್ನಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು 7 ರನ್ಗಳಿಂದ ಸೋಲಿಸುವ ಮೂಲಕ ಟೀಮ್ ಇಂಡಿಯಾ ಮತ್ತೊಮ್ಮೆ ವಿಶ್ವಕಪ್ಗೆ ಮುತ್ತಿಕ್ಕಿದೆ. ವಿಶ್ವ ಚಾಂಪಿಯನ್ ಭಾರತ ತಂಡದ ಸಂಭ್ರಮಾಚರಣೆ ವಿಡಿಯೋ ಇಲ್ಲಿದೆ.
ಟಿ20 ವಿಶ್ವಕಪ್ನಲ್ಲಿ (T20 World Cup) ಭಾರತ ತಂಡ ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಆಗಿದೆ. ಬಾರ್ಬಡೋಸ್ನಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ (South Africa) ತಂಡವನ್ನು 7 ರನ್ಗಳಿಂದ ಸೋಲಿಸುವ ಮೂಲಕ ಟೀಮ್ ಇಂಡಿಯಾ (Team India) ಮತ್ತೊಮ್ಮೆ ವಿಶ್ವಕಪ್ಗೆ ಮುತ್ತಿಕ್ಕಿದೆ. ಭಾರತ ತಂಡದ ಗೆಲುವಿಗೆ ಎಲ್ಲಡೆ ಸಂಭ್ರಮಾಚರಣೆ ನಡೆಯುತ್ತಿದೆ. ಟೀಂ ಇಂಡಿಯಾದ ಆಟಗಾರರು ಕಪ್ ಹಿಡಿದು ಮೈದಾನದಲ್ಲಿ ಕುಣಿದು ಕುಪ್ಪಳಿಸಿದರು. ತನ್ನ ಹುಡುಗರು ಕುಣಿಯುತ್ತಿದ್ದ ವೇಳೆ ನಾಯಕ ರೋಹಿತ್ ಶರ್ಮ್ ಶಾಂಪೇನ್ ಬಾಟಲ್ ಓಪನ್ ಮಾಡಿ ಸಂಭ್ರಮಿಸಿದರು. ಸಂಭ್ರಮಾಚರಣೆಯ ವಿಡಿಯೋ ಇಲ್ಲಿದೆ.
ಫೈನಲ್ ಪಂದ್ಯ:
ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 7 ರನ್ಗಳ ರೋಚಕ ಜಯ ಸಾಧಿಸಿದೆ.