T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
ಟಿ20 ವಿಶ್ವಕಪ್ನಲ್ಲಿ ಭಾರತ ತಂಡ ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಆಗಿದೆ. ಬಾರ್ಬಡೋಸ್ನಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು 7 ರನ್ಗಳಿಂದ ಸೋಲಿಸುವ ಮೂಲಕ ಟೀಮ್ ಇಂಡಿಯಾ ಮತ್ತೊಮ್ಮೆ ವಿಶ್ವಕಪ್ಗೆ ಮುತ್ತಿಕ್ಕಿದೆ. ಟೀಮ್ ಇಂಡಿಯಾ ಆಟಗಾರರು ರಾಹುಲ್ ದ್ರಾವಿಡ್ ಅವರನ್ನು ಮೇಲಕ್ಕೆ ತೂರಿ, ಕೋಚ್ಗೆ ಧನ್ಯವಾದ ಸಮರ್ಪಿಸಿದ ವಿಡಿಯೋ ಇಲ್ಲಿದೆ.
ಟಿ20 ವಿಶ್ವಕಪ್ನಲ್ಲಿ (T20 World Cup) ಭಾರತ ತಂಡ ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಆಗಿದೆ. ಬಾರ್ಬಡೋಸ್ನಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು 7 ರನ್ಗಳಿಂದ ಸೋಲಿಸುವ ಮೂಲಕ ಟೀಮ್ ಇಂಡಿಯಾ ಮತ್ತೊಮ್ಮೆ ವಿಶ್ವಕಪ್ಗೆ ಮುತ್ತಿಕ್ಕಿದೆ. 2007ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಟಿ20 ವಿಶ್ವ ಕಪ್ ಗೆದ್ದಿತ್ತು. ಇದೀಗ 17 ವರ್ಷಗಳ ನಂತರ ಭಾರತ ವಿಶ್ವ ಕಪ್ ಗೆದ್ದಿದೆ. ಭಾರತದಲ್ಲಿ ನಡೆದ ಏಕದಿನ 2023ರ ವಿಶ್ವಕಪ್ನಲ್ಲಿ ಫೈನಲ್ ಪಂದ್ಯದಲ್ಲಿ ಭಾರತ ಸೋಲು ಕಂಡಿತು. ಅಂದು ಕೋಚ್, ಕನ್ನಡಿಗ ರಾಹುಲ್ ದ್ರಾವಿಡ್ (Rahul Dravid) ಕಣ್ಣೀರು ಹಾಕಿದ್ದರು. ಇದೀಗ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಕನ್ನಡಿಗ ರಾಹುಲ್ ದ್ರಾವಿಡ್ ಸಂಭ್ರಮ ಮುಗಿಲು ಮುಟ್ಟಿದೆ.
ಟೀಂ ಇಂಡಿಯಾ ಆಟಗಾರರು ಮತ್ತು ಕೋಚ್ ರಾಹುಲ್ ದ್ರಾವಿಡ್ ಮೈದಾನದಲ್ಲಿ ಗೆಲುವಿನ ಸಂಭ್ರಮಾಚರಣೆ ನಡೆಸುತ್ತಿದ್ದರು. ಈ ವೇಳೆ ಟೀಮ್ ಇಂಡಿಯಾ ಆಟಗಾರರು ಕೋಚ್ ರಾಹುಲ್ ದ್ರಾವಿಡ್ ಅವರನ್ನು ಮೇಲಕ್ಕೆ ತೂರಿ, ಕೋಚ್ಗೆ ಧನ್ಯವಾದ ಸಮರ್ಪಿಸಿದರು. ಇದು ಭಾವನಾತ್ಮಕ ಸಂಭ್ರಮಾಚರಣೆಗೆ ಸಾಕ್ಷಿಯಾಯಿತು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ