ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ ಅವರು ಅಭಿನಯದಲ್ಲೂ ಬ್ಯುಸಿ ಆಗಿದ್ದಾರೆ. ‘ಸೂತ್ರಧಾರಿ’ ಚಿತ್ರದಲ್ಲಿ ಅವರು ಮುಖ್ಯ ಪಾತ್ರ ಮಾಡಿದ್ದಾರೆ. ಅವರ ಜೊತೆ ಅನುಭವಿ ಕಲಾವಿದ ತಬಲಾ ನಾಣಿ ಸಹ ನಟಿಸಿದ್ದಾರೆ. ಮೇ 9ರಂದು ಈ ಚಿತ್ರ ರಿಲೀಸ್ ಆಗಲಿದೆ. ಇತ್ತೀಚೆಗೆ ಈ ‘ಸೂತ್ರಧಾರಿ’ ಸಿನಿಮಾದ ಹಾಡುಗಳನ್ನು ಬಿಡುಗಡೆ ಮಾಡಲಾಯಿತು.
ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ (Chandan Shetty) ಅವರು ನಟನೆಯಲ್ಲೂ ತೊಡಗಿಕೊಂಡಿದ್ದಾರೆ. ‘ಸೂತ್ರಧಾರಿ’ (Suthradaari) ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅವರ ಜೊತೆ ತಬಲಾ ನಾಣಿ ಕೂಡ ನಟಿಸಿದ್ದಾರೆ. ಮೇ 9ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಇತ್ತೀಚೆಗೆ ಈ ಸಿನಿಮಾದ ಸಾಂಗ್ಸ್ ಬಿಡುಗಡೆ ಮಾಡಲಾಯಿತು. ಈ ವೇಳೆ ವೇದಿಕೆಯಲ್ಲಿ ತಬಲಾ ನಾಣಿ (Tabla Nani) ಅವರು ಮಾತನಾಡಿದರು. ‘ಚಂದನ್ ಶೆಟ್ಟಿ ಕೇವಲ ಸಿಂಗರ್ ಮತ್ತು ಮ್ಯೂಸಿಕ್ ಡೈರೆಕ್ಟರ್ ಅಷ್ಟೇ ಅಲ್ಲ. ಅವರ ಜೊತೆ ಪಾತ್ರ ಮಾಡಿದ್ದರಿಂದ ಈ ಮಾತು ಹೇಳುತ್ತಿದ್ದೇನೆ. ಅವರು ತುಂಬ ಟ್ಯಾಲೆಂಟ್ ಇರುವ ವ್ಯಕ್ತಿ’ ಎಂದು ತಬಲಾ ನಾಣಿ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos