ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೊಳಿಸಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಅಂತ ಸರ್ಕಾರ ಸೂಚಿಸಿದೆ. ಹೀಗಿದ್ದೂ, ತಹಶೀಲ್ದಾರ್ ಒಬ್ಬರು ಕೊರೊನಾ ನಿಯಮಗಳನ್ನ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ತಹಶೀಲ್ದಾರ್ ಕೊವಿಡ್ ರೂಲ್ಸ್ನ ಗಾಳಿಗೆ ತೂರಿ ಕಚೇರಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ವಿನಯ್ ಪಾಟೀಲ್ ಹುಟ್ಟುಹಬ್ಬ ಆಚರಣೆ ಮಾಡಿಕೊಂಡ ತಹಶೀಲ್ದಾರ್. ಕೊವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಹಿನ್ನೆಲೆ ಸಾರ್ವಜನಿರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಟ್ಟುಹಬ್ಬ ಆಚರಣೆ ಮಾಡಿಕೊಂಡ ಫೋಟೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ
‘ಉಗ್ರಾವತಾರ’ದಲ್ಲಿ ಸಿದ್ದಿ ಹಾಡುಗಾರರಿಂದ ವಿಶೇಷ ಹಾಡು; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?