AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ತಹಶೀಲ್ದಾರ್

ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ತಹಶೀಲ್ದಾರ್

ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 19, 2025 | 10:04 AM

Share

ಚಿತ್ತಾಪುರ ಕ್ಷೇತ್ರದಲ್ಲಿ ನಡೆಯಬೇಕಿದ್ದ ಆರ್​ಎಸ್​ಎಸ್ ಪಥಸಂಚಲನಕ್ಕೆ ತಹಶೀಲ್ದಾರ್ ನಾಗಯ್ಯ ಹಿರೇಮಠ್ ಅನುಮತಿ ನಿರಾಕರಿಸಿದ್ದಾರೆ. ಖಾಸಗಿ ಸಂಘಸಂಸ್ಥೆಗಳಿಗೆ ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ ಎಂಬ ಪ್ರಿಯಾಂಕ್ ಖರ್ಗೆ ಅವರ ಪತ್ರದ ಹಿನ್ನೆಲೆಯಲ್ಲಿ ಈ ಆದೇಶ ಹೊರಬಿದ್ದಿದೆ. ಅನುಮತಿ ನಿರಾಕರಣೆಯಿಂದ ಆರ್​ಎಸ್​ಎಸ್ ಕಾರ್ಯಕರ್ತರು ಕಾನೂನು ಹೋರಾಟಕ್ಕೆ ಸಜ್ಜಾಗಿದ್ದಾರೆ.

ಕಲಬುರಗಿ, ಅಕ್ಟೋಬರ್​ 19: ರಾಜ್ಯದಲ್ಲಿ ಆರ್​​​ಎಸ್​​ಎಸ್​​ (RSS) ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ವಿಚಾರದ ಸಂಘರ್ಷ ತಾರಕ್ಕೇರಿದೆ. ಈ ಮಧ್ಯೆ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಆರ್​ಎಸ್​ಎಸ್​​ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸುವ ಮೂಲಕ ತಹಶೀಲ್ದಾರ್​ ನಾಗಯ್ಯ ಹಿರೇಮಠ ಶಾಕ್​ ನೀಡಿದ್ದಾರೆ. ಸದ್ಯ ಕಾನೂನು ಹೋರಾಟಕ್ಕೆ ಆರ್​ಎಸ್​ಎಸ್ ಕಾರ್ಯಕರ್ತರು ಸಜ್ಜಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.