ಯೋಗೇಶ್ವರ್ ವಿರುದ್ಧ ಸ್ಪರ್ಧಿಸುವುದು ಧೈರ್ಯದ ಪ್ರಶ್ನೆ ಅಲ್ಲವೆಂದ ನಿಖಿಲ್ ಕುಮಾರಸ್ವಾಮಿ

|

Updated on: Oct 23, 2024 | 1:14 PM

ಕೊನೇಘಳಿಗೆಯಲ್ಲಿ ಕಾಂಗ್ರೆಸ್ ಪಕ್ಷ ಸೇರುವ ಮೂಲಕ ಯೋಗೇಶ್ವರ್ ಜೆಡಿಎಸ್ ಮತ್ತು ಬಿಜೆಪಿ ನಾಯಕರನ್ನು ಸಂದಿಗ್ಧತೆಗೆ ದೂಡಿದ್ದಾರೆ. ಚನ್ನಪಟ್ಟಣದಲ್ಲಿ ಅವರು ಪ್ರಭಾವಶಾಲಿ ನಾಯಕ ಅನ್ನೋದು ಸುಳ್ಳಲ್ಲ. ಈ ಹಿನ್ನೆಲೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಯಾರನ್ನು ಕಣಕ್ಕಿಳಿಸುವ ನಿರ್ಧಾರ ಮಾಡುತ್ತಾರೆ ಅನ್ನೋದು ಕುತೂಹಲಕಾರಿ ಅಂಶವಾಗಿದೆ.

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಸ್ಪರ್ಧಿಸುವುದು ಹೆಚ್ಚುಕಡಿಮೆ ಖಚಿತವಾಗಿದೆ. ಅವರ ವಿರುದ್ಧ ಎನ್​ಡಿಎ ಅಥವಾ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಧೈರ್ಯ ನಿಖಿಲ್ ಕುಮಾರಸ್ವಾಮಿ ತೋರುವರೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜೆಡಿಎಸ್ ಯುವಮುಖಂಡ, ಇದು ಧೈರ್ಯದ ಪ್ರಶ್ನೆ ಅಲ್ಲ, ಅಭ್ಯರ್ಥಿ ಯಾರು ಅನ್ನೋದನ್ನು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜೊತೆಗೂಡಿ ನಿರ್ಧರಿಸಲಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ನಿಖಿಲ್ ಹಿಂಜರಿಯುತ್ತಿರುವುದೇಕೆ?ಇಲ್ಲಿವೆ ಪ್ರಮುಖ ಕಾರಣಗಳು