AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ತೀರ್ಥೋದ್ಭವ ಸಂಭ್ರಮ: ಜಿಲ್ಲಾಡಳಿತದಿಂದ ವ್ಯಾಪಕ ಸಿದ್ಧತೆ

ಕೊಡಗಿನಲ್ಲಿ ತೀರ್ಥೋದ್ಭವ ಸಂಭ್ರಮ: ಜಿಲ್ಲಾಡಳಿತದಿಂದ ವ್ಯಾಪಕ ಸಿದ್ಧತೆ

ಅಕ್ಷತಾ ವರ್ಕಾಡಿ
|

Updated on: Oct 17, 2026 | 2:38 PM

Share

ಕಾವೇರಿ ತೀರ್ಥೋದ್ಭವಕ್ಕೆ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ. ಇಂದು ಸಂಜೆ 7.50ಕ್ಕೆ ಶುಭ ಮೇಷ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ. ಲಕ್ಷಾಂತರ ಭಕ್ತರು ಸೇರುವ ನಿರೀಕ್ಷೆಯಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ. ಪುಣ್ಯ ಸ್ನಾನದಿಂದ ಪಾಪ ನಿವಾರಣೆಯ ನಂಬಿಕೆ ಇದೆ.

ಜೀವನದಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡುವ ಪವಿತ್ರ ಘಳಿಗೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಸಂಜೆ 7 ಗಂಟೆ 50 ನಿಮಿಷಕ್ಕೆ ಸರಿಯಾಗಿ ಶುಭ ಮೇಷ ಲಗ್ನದಲ್ಲಿ ತಲಕಾವೇರಿಯಲ್ಲಿ ತೀರ್ಥೋದ್ಭವ ನಡೆಯಲಿದೆ. ಈ ಪವಿತ್ರ ಘಟನೆಗೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಬ್ರಹ್ಮಕುಂಡಿಕೆಯ ಆವರಣವನ್ನು ವೈವಿಧ್ಯಮಯ ಹೂಗಳಿಂದ ಅಲಂಕರಿಸಲಾಗಿದ್ದು, ಕಾವೇರಿ ದೀಪವಿರುವ ಗರ್ಭಗುಡಿಯನ್ನು ಬೆಳ್ಳಿಯ ಹೊದಿಕೆಗಳಿಂದ ಸುಂದರಗೊಳಿಸಲಾಗಿದೆ. ನೂರಾರು ಸಂಖ್ಯೆಯಲ್ಲಿ ಭಕ್ತರು ಈಗಿನಿಂದಲೇ ಆಗಮಿಸತೊಡಗಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ನರೇಂದ್ರಸ್ವಾಮಿ ಅವರೂ ಭಾಗವಹಿಸಲಿದ್ದಾರೆ.

ತೀರ್ಥೋದ್ಭವದ ಸಮಯದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡುವ ಜತೆಗೆ, ಗಂಗಾ ನದಿಯ ಸಾನಿಧ್ಯವೂ ಇರುತ್ತದೆ ಎಂಬ ನಂಬಿಕೆಯಿದೆ. ಈ ಪುಣ್ಯ ಘಳಿಗೆಯಲ್ಲಿ ಬ್ರಹ್ಮಕುಂಡಿಕೆಯಲ್ಲಿ ಪುಣ್ಯ ಸ್ನಾನ ಮಾಡಿದರೆ ಪಾಪಗಳು ನಾಶವಾಗುತ್ತವೆ ಎಂದು ಭಕ್ತರು ದೃಢವಾಗಿ ನಂಬುತ್ತಾರೆ. ಭಕ್ತರ ಸುಗಮ ದರ್ಶನಕ್ಕಾಗಿ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಹಾಗೂ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More