ಮೇಷ ಲಗ್ನದಲ್ಲಿ ತೀರ್ಥಸ್ವರೂಪಿಣಿಯಾಗಿ ಕಾವೇರಿ ದರ್ಶನ

Updated on: Oct 17, 2026 | 8:10 PM

ಕೊಡಗಿನ ಭಾಗಮಂಡಲದ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವು ಅತ್ಯಂತ ಭಕ್ತಿಭಾವದಿಂದ ನೆರವೇರಿತು. ಮೇಷ ಲಗ್ನದಲ್ಲಿ ಕಾವೇರಿ ಮಾತೆಯು ಉದ್ಭವಗೊಂಡು ಭಕ್ತರಿಗೆ ದರ್ಶನ ನೀಡಿದರು. ಕರ್ನಾಟಕ ಸೇರಿದಂತೆ ತಮಿಳುನಾಡು, ಆಂಧ್ರಪ್ರದೇಶ, ಕೇರಳದಿಂದ ಸಾವಿರಾರು ಭಕ್ತರು ಆಗಮಿಸಿ ಕಾವೇರಿ ಅಮ್ಮನ ಆಶೀರ್ವಾದ ಪಡೆದರು. ಸುಗಮ ಆಚರಣೆಗಾಗಿ ಜಿಲ್ಲಾಡಳಿತ ಹಾಗೂ ಪೊಲೀಸರು ಉತ್ತಮ ಭದ್ರತೆ ಒದಗಿಸಿದ್ದರು.

ಮಡಿಕೇರಿ, ಅ.17: ಕೊಡಗು ಜಿಲ್ಲೆಯ ಪವಿತ್ರ ಪುಣ್ಯಕ್ಷೇತ್ರ ಭಾಗಮಂಡಲದ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವು ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿತು. ಮೇಷ ಲಗ್ನದಲ್ಲಿ ತೀರ್ಥಸ್ವರೂಪಿಣಿಯಾಗಿ ಕಾವೇರಿ ಅಮ್ಮನ ದರ್ಶನ ಪಡೆಯಲು ಕಾವೇರಿ ಉದ್ಭವ ಕ್ಷೇತ್ರಕ್ಕೆ ರಾಜ್ಯದ ವಿವಿಧಡೆಯಿಂದ ಮಾತ್ರವಲ್ಲದೆ ನೆರೆಯ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕೇರಳದಿಂದಲೂ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ನಿಗದಿತ ಮೇಷ ಲಗ್ನದಲ್ಲಿ ಕಾವೇರಿ ಕುಂಡಿಕೆಯಿಂದ ತೀರ್ಥರೂಪಿಣಿಯಾಗಿ ಕಾವೇರಿ ಮಾತೆಯು ಉದ್ಭವಗೊಂಡು ಭಕ್ತರಿಗೆ ಕೃಪೆ ತೋರಿದರು. ತೀರ್ಥೋದ್ಭವದ ಪವಿತ್ರ ಕ್ಷಣವನ್ನು ಕಣ್ತುಂಬಿಕೊಂಡ ಭಕ್ತರ ಮೇಲೆ ಅರ್ಚಕರು ತೀರ್ಥ ಪ್ರೋಕ್ಷಣೆ ಮಾಡಿದರು. ಈ ವೇಳೆ ನೆರೆದಿದ್ದ ಭಕ್ತರು ‘ಕಾವೇರಿ ಮಾತೆ ಕಿ ಜೈ’ ಎಂದು ಭಕ್ತಿಭಾವದಿಂದ ಜೈಕಾರ ಕೂಗಿದರು. ಲಕ್ಷಾಂತರ ಭಕ್ತರು ಸೇರುವ ಈ ಪವಿತ್ರ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಜನದಟ್ಟಣೆಯನ್ನು ನಿಯಂತ್ರಿಸಲು ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ 500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಆಡಳಿತದ ಸಕಲ ಸಿದ್ಧತೆಗಳಿಂದಾಗಿ ಭಕ್ತರು ಯಾವುದೇ ತೊಂದರೆಯಿಲ್ಲದೆ ಸುಲಭವಾಗಿ ತೀರ್ಥ ಸ್ನಾನ ಹಾಗೂ ಅಮ್ಮನ ದರ್ಶನ ಪಡೆದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 17, 2026 08:09 PM
Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More