ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ಶಿವರಾಜ್ ತಂಗಡಗಿ
ಹಿಟ್ನಾಳ ಗ್ರಾಮದ ಬಳಿ ಹಮ್ಮಿಕೊಂಡಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮವು ರಣರಂಗವಾಗಿ ಮಾರ್ಪಟ್ಟಿದೆ. ಹೌದು...ಇಂದು (ಜನವರಿ 05) ಕೊಪ್ಪಳದ ಹಿಟ್ನಾಳ ಗ್ರಾಮದಲ್ಲಿ 27 ಕೋಟಿ ರೂಪಾಯಿ ವೆಚ್ಚದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೇಂದ್ರ ಸಚಿವ ವಿ ಸೋಮಣ್ಣ ನಡುವೆ ಸಂಘರ್ಷ ಏರ್ಪಟ್ಟಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂಸದರ ಹೆಸರು ಹಾಕಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ತೂರಾಟ ನಡೆಸಿ, ಸಚಿವರ ಕಾರಿಗೆ ಅಡ್ಡಿಪಡಿಸಿದರು.
ಕೊಪ್ಪಳ, (ಜನವರಿ 05): ಹಿಟ್ನಾಳ ಗ್ರಾಮದ ಬಳಿ ಹಮ್ಮಿಕೊಂಡಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮವು ರಣರಂಗವಾಗಿ ಮಾರ್ಪಟ್ಟಿದೆ. ಹೌದು…ಇಂದು (ಜನವರಿ 05) ಕೊಪ್ಪಳದ (Koppal) ಹಿಟ್ನಾಳ ಗ್ರಾಮದಲ್ಲಿ 27 ಕೋಟಿ ರೂಪಾಯಿ ವೆಚ್ಚದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೇಂದ್ರ ಸಚಿವ ವಿ ಸೋಮಣ್ಣ ನಡುವೆ ಸಂಘರ್ಷ ಏರ್ಪಟ್ಟಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂಸದರ ಹೆಸರು ಹಾಕಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ತೂರಾಟ ನಡೆಸಿ, ಸಚಿವರ ಕಾರಿಗೆ ಅಡ್ಡಿಪಡಿಸಿದರು. ಇನ್ನು ಇದೇ ವೇಳೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಅವರು ಟಿವಿ9 ಜತೆ ಮಾತನಾಡುವುದನ್ನು ಅರ್ಧಕ್ಕೆ ಬಿಟ್ಟು ಆಕ್ರೋಶದಿಂದ ಸೋಮಣ್ಣ ಇದ್ದ ವೇದಿಕೆಗೆ ನುಗ್ಗಿರುವ ಪ್ರಸಂಗ ಜರುಗಿದೆ.

