ದೀರ್ಘಾವಧಿ ಮೈತ್ರಿ ಕಾಯ್ದುಕೊಳ್ಳುವ ನಿಟ್ಟಿನೆಡೆ ಬಿಜೆಪಿ ನಾಯಕರ ಜೊತೆ ನಡೆದ ಮಾತುಕತೆ ಕೇಂದ್ರೀಕೃತವಾಗಿತ್ತು: ಹೆಚ್ ಡಿ ಕುಮಾರಸ್ವಾಮಿ
ಸೀಟು ಹೊಂದಾಣಿಕೆ ವಿಷಯದಲ್ಲಿ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಗಳಿಲ್ಲ ಎಂದ ಕುಮಾರಸ್ವಾಮಿ ಮೈತ್ರಿ ಹೊರತಾಗಿ ರಾಜ್ಯದ ಹಲವಾರು ಸಮಸ್ಯೆಗಳನ್ನು ಬಿಜೆಪಿ ನಾಯಕರೊಂದಿಗೆ ಚರ್ಚಿಸಲಾಗಿದೆ ಆ ವಿಷಯಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲಾಗದು ಎಂದರು.
ಬೆಂಗಳೂರು: ದೆಹಲಿಯಿಂದ ವಾಪಸ್ಸಾದ ಬಳಿಕ ನಗರದ ಕೆಐಎನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಬಿಜೆಪಿ ಜೊತೆ ಮೈತ್ರಿಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ (Amit Shah) ಮತ್ತು ಜೆಪಿ ನಡ್ಡಾ ಅವರೊಂದಿಗೆ ಸೌಹಾರ್ದಯುತ (cordial) ಮತ್ತು ಗೌರವಯುತವಾಗಿ ಚರ್ಚೆ ನಡೆದಿವೆ ಎಂದು ಹೇಳಿದರು. ಬಿಜೆಪಿ ಮತ್ತುಜ ಜೆಡಿಎಸ್ ಒಂದು ದೀರ್ಘಾವಧಿ ಸಂಬಂಧ ಕಾಯ್ದುಕೊಳ್ಳುವ ನಿಟ್ಟಿನೆಡೆ ಮಾತುಕತೆ ಕೇಂದ್ರೀಕೃತವಾಗಿತ್ತು ಎಂದು ಕುಮಾರಸ್ವಾಮಿ ಹೇಳಿದರು. ಸೀಟು ಹೊಂದಾಣಿಕೆ ವಿಷಯದಲ್ಲಿ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಗಳಿಲ್ಲ ಎಂದು ಅವರು ಮೈತ್ರಿ ಹೊರತಾಗಿ ರಾಜ್ಯದ ಹಲವಾರು ಸಮಸ್ಯೆಗಳನ್ನು ಬಿಜೆಪಿ ನಾಯಕರೊಂದಿಗೆ ಚರ್ಚಿಸಲಾಗಿದೆ, ಆ ವಿಷಯಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲಾಗದು ಎಂದರು. ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವುದು ತಮ್ಮ ಆದ್ಯತೆಯಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ