ಅನಂತ್ ಅಂಬಾನಿ ಆರತಕ್ಷತೆಗೆ ಪಳಪಳನೆ ಹೊಳೆಯುತ್ತಾ ಬಂದ ತಮನ್ನಾ ಭಾಟಿಯಾ
ಮುಂಬೈನಲ್ಲಿ ರಾಧಿಕಾ ಮರ್ಚೆಂಟ್ ಹಾಗೂ ಅನಂತ್ ಅಂಬಾನಿಯ ಆರತಕ್ಷತೆ ಸಮಾರಂಭ ನಡೆಯುತ್ತಿದ್ದು, ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದಾರೆ. ನಟಿ ತಮನ್ನಾ ಭಾಟಿಯಾ ಅವರು ಕಣ್ಮನ ಸೆಳೆಯುವಂತಹ ಉಡುಗೆ ಧರಿಸಿ ಈ ಸಮಾರಂಭಕ್ಕೆ ಬಂದಿದ್ದಾರೆ. ಬಹುಭಾಷೆಯಲ್ಲಿ ಬೇಡಿಕೆ ಹೊಂದಿರುವ ತಮನ್ನಾ ಭಾಟಿಯಾಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ.
ಮುಕೇಶ್ ಅಂಬಾನಿ-ನೀತಾ ಅಂಬಾನಿ ದಂಪತಿಯ ಪುತ್ರ ಅನಂತ್ ಅಂಬಾನಿಯ ಮದುವೆ ಮುಗಿದಿದೆ. ಇಂದು (ಜುಲೈ 14) ಆರತಕ್ಷತೆ ಕಾರ್ಯಕ್ರಮ ಕೂಡ ಅಷ್ಟೇ ಅದ್ದೂರಿಯಾಗಿ ನಡೆಯುತ್ತಿದೆ. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ರಿಸೆಪ್ಷನ್ ನಡೆಯುತ್ತಿದ್ದು, ಹಲವಾರು ಸೆಲೆಬ್ರಿಟಿಗಳು ಅತಿಥಿಗಳಾಗಿ ಭಾಗವಹಿಸಿದ್ದಾರೆ. ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರಿಗೂ ಈ ಸಮಾರಂಭಕ್ಕೆ ಆಹ್ವಾನ ಬಂದಿದೆ. ಹಾಗಾಗಿ ಅವರು ಕುಟುಂಬದವರ ಜೊತೆ ಬಂದು ನವ ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ. ಆಕರ್ಷಕವಾದ ಉಡುಗೆ ಧರಿಸಿ ಬಂದಿರುವ ತಮನ್ನಾ ಅವರು ಪಾಪರಾಜಿಗಳ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ಚಂದದ ಡ್ರೆಸ್ನಲ್ಲಿ ಅವರು ಪಳಪಳನೆ ಹೊಳೆದಿದ್ದಾರೆ. ತಮನ್ನಾ ಭಾಟಿಯಾ ಅವರ ಅಭಿಮಾನಿಗಳ ವಲಯದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಹಿಂದಿ, ತೆಲುಗು, ತಮಿಳು, ಕನ್ನಡ ಸಿನಿಮಾಗಳಲ್ಲಿ ನಟಿಸಿ ತಮನ್ನಾ ಫೇಮಸ್ ಆಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ

