ಅನಂತ್ ಅಂಬಾನಿ ಆರತಕ್ಷತೆಗೆ ಪಳಪಳನೆ ಹೊಳೆಯುತ್ತಾ ಬಂದ ತಮನ್ನಾ ಭಾಟಿಯಾ

Updated on: Jul 14, 2024 | 11:05 PM

ಮುಂಬೈನಲ್ಲಿ ರಾಧಿಕಾ ಮರ್ಚೆಂಟ್ ಹಾಗೂ ಅನಂತ್​ ಅಂಬಾನಿಯ ಆರತಕ್ಷತೆ ಸಮಾರಂಭ ನಡೆಯುತ್ತಿದ್ದು, ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದಾರೆ. ನಟಿ ತಮನ್ನಾ ಭಾಟಿಯಾ ಅವರು ಕಣ್ಮನ ಸೆಳೆಯುವಂತಹ ಉಡುಗೆ ಧರಿಸಿ ಈ ಸಮಾರಂಭಕ್ಕೆ ಬಂದಿದ್ದಾರೆ. ಬಹುಭಾಷೆಯಲ್ಲಿ ಬೇಡಿಕೆ ಹೊಂದಿರುವ ತಮನ್ನಾ ಭಾಟಿಯಾಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ.

ಮುಕೇಶ್​ ಅಂಬಾನಿ-ನೀತಾ ಅಂಬಾನಿ ದಂಪತಿಯ ಪುತ್ರ ಅನಂತ್ ಅಂಬಾನಿಯ ಮದುವೆ ಮುಗಿದಿದೆ. ಇಂದು (ಜುಲೈ 14) ಆರತಕ್ಷತೆ ಕಾರ್ಯಕ್ರಮ ಕೂಡ ಅಷ್ಟೇ ಅದ್ದೂರಿಯಾಗಿ ನಡೆಯುತ್ತಿದೆ. ಮುಂಬೈನ ಜಿಯೋ ವರ್ಲ್ಡ್​ ಕನ್ವೆನ್ಷನ್ ಸೆಂಟರ್​ನಲ್ಲಿ ರಿಸೆಪ್ಷನ್​ ನಡೆಯುತ್ತಿದ್ದು, ಹಲವಾರು ಸೆಲೆಬ್ರಿಟಿಗಳು ಅತಿಥಿಗಳಾಗಿ ಭಾಗವಹಿಸಿದ್ದಾರೆ. ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರಿಗೂ ಈ ಸಮಾರಂಭಕ್ಕೆ ಆಹ್ವಾನ ಬಂದಿದೆ. ಹಾಗಾಗಿ ಅವರು ಕುಟುಂಬದವರ ಜೊತೆ ಬಂದು ನವ ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ. ಆಕರ್ಷಕವಾದ ಉಡುಗೆ ಧರಿಸಿ ಬಂದಿರುವ ತಮನ್ನಾ ಅವರು ಪಾಪರಾಜಿಗಳ ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ. ಈ ಚಂದದ ಡ್ರೆಸ್​ನಲ್ಲಿ ಅವರು ಪಳಪಳನೆ ಹೊಳೆದಿದ್ದಾರೆ. ತಮನ್ನಾ ಭಾಟಿಯಾ ಅವರ ಅಭಿಮಾನಿಗಳ ವಲಯದಲ್ಲಿ ಈ ವಿಡಿಯೋ ವೈರಲ್​ ಆಗುತ್ತಿದೆ. ಹಿಂದಿ, ತೆಲುಗು, ತಮಿಳು, ಕನ್ನಡ ಸಿನಿಮಾಗಳಲ್ಲಿ ನಟಿಸಿ ತಮನ್ನಾ ಫೇಮಸ್​ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More