Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರುನಾಡಿಗೆ ಬಂದು ಆದಿಯೋಗಿ ಎದುರು ನಾಗಮಂಡಲ ಕಾರ್ಯಕ್ರಮದಲ್ಲಿ ಭಾಗಿಯಾದ ತಮನ್ನಾ ಭಾಟಿಯಾ

ಕರುನಾಡಿಗೆ ಬಂದು ಆದಿಯೋಗಿ ಎದುರು ನಾಗಮಂಡಲ ಕಾರ್ಯಕ್ರಮದಲ್ಲಿ ಭಾಗಿಯಾದ ತಮನ್ನಾ ಭಾಟಿಯಾ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಮದನ್​ ಕುಮಾರ್​

Updated on: Aug 21, 2023 | 9:47 PM

ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಬಳಿ ಇರುವ ಇಶಾ ಫೌಂಡೇಷನ್​ನಲ್ಲಿ ಜಗ್ಗಿ ವಾಸುದೇವ್​ ಅವರು ನಾಗಮಂಡಲ ಕಾರ್ಯಕ್ರಮ ನಡೆಸುತ್ತಿದ್ದಾರೆ. ಅದರಲ್ಲಿ ತಮನ್ನಾ ಭಾಟಿಯಾ ಭಾಗಿಯಾಗಿದ್ದಾರೆ. ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಹಲವು ಗಣ್ಯರು ಕೂಡ ಪಾಲ್ಗೊಂಡಿದ್ದಾರೆ.

ಬಹುಭಾಷಾ ನಟಿ ತಮನ್ನಾ ಭಾಟಿಯಾ (Tamanna Bhatia) ಅವರು ‘ಜೈಲರ್’ ಸಿನಿಮಾದ ಗೆಲುವಿನ ಖುಷಿಯಲ್ಲಿದ್ದಾರೆ. ಅವರಿಗೆ ದೇವರ ಬಗ್ಗೆ ಅಪಾರವಾದ ಭಕ್ತಿ ಇದೆ. ಇಂದು (ಆಗಸ್ಟ್​ 21) ನಾಗರ ಪಂಚಮಿ ಹಬ್ಬದ ಪ್ರಯುಕ್ತ ತಮನ್ನಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಬಳಿ ಇರುವ ಇಶಾ ಫೌಂಡೇಷನ್​ನಲ್ಲಿ (Isha Foundation) ಅವರು ಸದ್ಗುರು ಜಗ್ಗಿ ವಾಸುದೇವ್​ (Jaggi Vasudev) ಜೊತೆ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ನಾಗಮಂಡಲ ಕಾರ್ಯಕ್ರಮದಲ್ಲಿ ತಮನ್ನಾ ಭಾಟಿಯಾ ಜೊತೆ ಸಚಿವರಾದ ಕೆ.ಹೆಚ್. ಮುನಿಯಪ್ಪ, ಡಾ. ಎಂ.ಸಿ. ಸುಧಾಕರ್, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.