ಒಂದೇ ಫ್ರೇಮ್​ನಲ್ಲಿ ತಮನ್ನಾ-ಐಶ್ವರ್ಯಾ ಶಿವಕುಮಾರ್; ಇಲ್ಲಿದೆ ವಿಡಿಯೋ

Updated on: Aug 22, 2023 | 8:38 AM

ನಟಿ ತಮನ್ನಾ ಅವರು ಪೂಜೆಯಲ್ಲಿ ಕಾಣಿಸಿಕೊಂಡರು. ಇವರ ಪಕ್ಕದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಗಳು ಐಶ್ವರ್ಯಾ ಕೂಡ ಇದ್ದರು. ಇಬ್ಬರೂ ಒಂದೇ ಫ್ರೇಮ್​ನಲ್ಲಿ ಕಾಣಿಸಿದ್ದಾರೆ. ಅನೇಕ ರಾಜಕೀಯ ನಾಯಕರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಸಮೀಪ ಇರುವ ಇಶಾ ಫೌಂಡೇಷನ್​ಗೆ ಸದ್ಗುರು ಆಗಮಿಸಿದ್ದಾರೆ. ನಾಗರಪಂಚಮಿ ಪ್ರಯುಕ್ತ ನಾಗಮಂಡಲ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ನಟಿ ತಮನ್ನಾ (Tamannah Bhatia) ಅವರು ಪೂಜೆಯಲ್ಲಿ ಕಾಣಿಸಿಕೊಂಡರು. ಇವರ ಪಕ್ಕದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಗಳು ಐಶ್ವರ್ಯಾ (Aishwarya) ಕೂಡ ಇದ್ದರು. ಇಬ್ಬರೂ ಒಂದೇ ಫ್ರೇಮ್​ನಲ್ಲಿ ಕಾಣಿಸಿದ್ದಾರೆ. ಅನೇಕ ರಾಜಕೀಯ ನಾಯಕರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಸಚಿವ ಕೆ.ಹೆಚ್. ಮುನಿಯಪ್ಪ ಕೂಡ ಹಾಜರಿ ಹಾಕಿದ್ದರು. ರಾಕ್​​ಲೈನ್ ವೆಂಕಟೇಶ್ ಕೂಡ ಭಾಗಿ ಆದರು. ತಮನ್ನಾ ಅವರು ಸದ್ಯ ‘ಜೈಲರ್’ ಸಿನಿಮಾದ ಗೆಲುವಿನ ಖುಷಿಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More