ಮತ್ತೆ ಕನ್ನಡಕ್ಕೆ ಮರಳಲಿದ್ದಾರೆ ತಮನ್ನಾ? ‘ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ಪ್ರಮುಖ ಪಾತ್ರ
‘ಸಂಜು ವೆಡ್ಸ್ ಗೀತಾ’ ಚಿತ್ರದಲ್ಲಿ ಶ್ರೀನಗರ ಕಿಟ್ಟಿಗೆ ಜೊತೆಯಾಗಿ ರಚಿತಾ ರಾಮ್ ಅವರು ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ತಮನ್ನಾ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ’ (Sanju Weds Geetha) ಸಿನಿಮಾ ಸೂಪರ್ ಹಿಟ್ ಆಯಿತು. ಈಗ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ತೆರೆಗೆ ಬರೋಕೆ ಸಿದ್ಧವಾಗಿದೆ. ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿಗೆ ಜೊತೆಯಾಗಿ ರಚಿತಾ ರಾಮ್ ಅವರು ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ತಮನ್ನಾ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ನಾಗಶೇಖರ್ ಮಾಹಿತಿ ನೀಡಿದ್ದಾರೆ. ಅವರನ್ನು ಈಗಾಗಲೇ ಅಪ್ರೋಚ್ ಮಾಡಲು ಸಿದ್ಧತೆ ನಡೆದಿದೆ. ಈ ಮೊದಲು ‘ಕೆಜಿಎಫ್’ ಸಿನಿಮಾದ ವಿಶೇಷ ಹಾಡಿನಲ್ಲಿ ತಮನ್ನಾ ಹೆಜ್ಜೆ ಹಾಕಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos