ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ

Updated on: Feb 10, 2026 | 10:42 PM

ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರು ಮೈಸೂರು ಸ್ಯಾಂಡಲ್​ ಸೋಪ್​​ಗೆ ಪ್ರಚಾರ ರಾಯಭಾರಿ ಆಗಿದ್ದಾರೆ. ಇಂದು (ಫೆಬ್ರವರಿ 10) ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮನ್ನಾ ಭಾಗಿಯಾದರು. ಹೊಸ ರೂಪದ ಸೋಪನ್ನು ಅವರು ಬಿಡುಗಡೆ ಮಾಡಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ.

ಬಹುಭಾಷಾ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರು ಮೈಸೂರು ಸ್ಯಾಂಡಲ್​ ಸೋಪ್​​ಗೆ ಪ್ರಚಾರ ರಾಯಭಾರಿ. ಇಂದು (ಫೆಬ್ರವರಿ 10) ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮನ್ನಾ ಭಾಗಿಯಾದರು. ಹೊಸ ರೂಪದ ಸೋಪನ್ನು ಅವರು ಬಿಡುಗಡೆ ಮಾಡಿದರು. ‘ಎಲ್ಲರಿಗೂ ನಮಸ್ಕಾರ’ ಎಂದು ಕನ್ನಡದಲ್ಲೇ ಹೇಳುವ ಮೂಲಕ ತಮನ್ನಾ ಅವರು ಮಾತು ಆರಂಭಿಸಿದರು. ಬಳಿಕ ಅವರು ಇಂಗ್ಲಿಷ್​​ನಲ್ಲಿ ಮಾತು ಮುಂದುವರಿಸಿದರು. ‘ನನಗೆ ಇದು ತುಂಬಾ ದೊಡ್ಡ ಗೌರವ ಹಾಗೂ ಹೆಮ್ಮೆ. KSDL ಕುಟುಂಬದಲ್ಲಿ ನಾನೂ ಒಬ್ಬಳಾಗಿದ್ದೇನೆ. 20 ವರ್ಷಗಳಿಂದ ಚಿತ್ರರಂಗದಲ್ಲಿ ಇದ್ದೀನಿ. ಇಂದಿನಿಂದ ನನ್ನ ಬದುಕಿನ ಹೊಸ ಚಾಪ್ಟರ್ ಶುರು ಆಗಿದೆ. ಮೈಸೂರು ಸ್ಯಾಂಡಲ್ ಸೋಪ್ (Mysore Sandal Soap) ಎಂದರೆ ಎಮೋಷನ್ ಹಾಗೂ ಬಾಲ್ಯದ ನೆನಪು. ಎಷ್ಟೇ ಸೋಪ್​​ಗಳು ಮಾರುಕಟ್ಟೆಗೆ ಬಂದರೂ ಮೈಸೂರ್ ಸ್ಯಾಂಡಲ್​ ಸೋಪ್ ಜನರ ಹೃದಯದಲ್ಲಿ ಸ್ಥಾನ ಪಡೆದುಕೊಂಡಿದೆ. ನಾನು ತುಂಬಾ ಅದೃಷ್ಟವಂತೆ. ಮೈಸೂರ್ ಸ್ಯಾಂಡಲ್​ ಸೋಪಿಗೆ ರಾಯಭಾರಿ ಆಗಿದ್ದೇನೆ’ ಎಂದು ತಮನ್ನಾ ಭಾಟಿಯಾ ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Feb 10, 2026 10:38 PM
Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More