ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
Tamil actor Vishal: ತಮಿಳು ಚಿತ್ರರಂಗದ ಜನಪ್ರಿಯ ನಟ ವಿಶಾಲ್ ಕರ್ನಾಟಕದ ಕರಾವಳಿ ಭಾಗಕ್ಕೆ ಭೇಟಿ ನೀಡಿದ್ದು, ಕರಾವಳಿ ಭಾಗದ ಪ್ರಮುಖ ದೇವಾಲಯಗಳ ಸುತ್ತಾಟದಲ್ಲಿ ಬ್ಯುಸಿಯಾಗಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದ್ದಾರೆ. ದೈವದ ಕೋಲದಲ್ಲಿಯೂ ಭಾಗಿ ಆಗಿದ್ದಾರೆ.
ತಮಿಳಿನ ಖ್ಯಾತ ನಟ ವಿಶಾಲ್ ಇದೀಗ ಕರ್ನಾಟಕಕ್ಕೆ ಬಂದಿದ್ದು ಕರಾವಳಿ ಭಾಗದ ದೇವಾಲಯಗಳ ಸುತ್ತಾಟ ನಡೆಸಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದ್ದ ವಿಶಾಲ್ ವಿಶೇಷ ಪೂಜೆ ಮಾಡಿಸಿದ್ದಾರೆ. ಅದರ ಜೊತೆಗೆ ದೈವದ ಕೋಲಾದಲ್ಲಿಯೂ ಸಹ ವಿಶಾಲ್ ಭಾಗವಹಿಸಿದ್ದಾರೆ. ‘ಕಾಂತಾರ’ ಸಿನಿಮಾದ ಬಳಿಕ ಹಲವು ಸ್ಟಾರ್ ನಟ, ನಟಿಯರು ಮಂಗಳೂರು, ಉಡುಪಿ ಸೇರಿದಂತೆ ಕರಾವಳಿಯ ಹಲವು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆಗಳಲ್ಲಿ ಭಾಗಿ ಆಗುತ್ತಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 12, 2025 04:56 PM
Latest Videos