ಅಮೆರಿಕದ ಕೃಷ್ಣ ಮಂದಿರದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ

Edited By:

Updated on: Apr 29, 2025 | 3:10 PM

ಅಮೆರಿಕಾದ ವಿಶ್ವವಿದ್ಯಾಲಯಗಳಲ್ಲಿ ಉಪನ್ಯಾಸ ನೀಡಲು ತೆರಳಿದ್ದ ಅಣ್ಣಾಮಲೈ ಈ ವೇಳೆ ಕಾರ್ಯಕ್ರಮ ಸಂಯೋಜಕರ ಬಳಿ ಮಾಹಿತಿ ಪಡೆದು ಕೃಷ್ಣ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಉಡುಪಿಯ ಶ್ರೀ ಪುತ್ತಿಗೆ ಮಠದ ಶ್ರೀ ಕೃಷ್ಣ ಮಂದಿರ ಅಮೆರಿಕದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಶಿ, ನಕ್ಷತ್ರಗಳನ್ನು ಹೇಳಿ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ಪೂಜೆ ಸಲ್ಲಿಸಿದ್ದಾರೆ.

ವಾಷಿಂಗ್ಟನ್, ಏಪ್ರಿಲ್ 29: ಅಮೆರಿಕ ಪ್ರವಾಸದಲ್ಲಿರುವ ತಮಿಳುನಾಡು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ (K Annamalai) ಅಮೆರಿಕ ದೇಗುಲದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರಲ್ಲಿ ಪೂಜೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ರಾಶಿ, ನಕ್ಷತ್ರಗಳನ್ನು ಹೇಳಿ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಪಹಲ್ಗಾಮ್ ದಾಳಿಯ ನಂತರ ದೇಶದ ಸೈನ್ಯಕ್ಕೆ ಶಕ್ತಿ ತುಂಬಲು ಅವರು ಪ್ರಾರ್ಥನೆ ಮಾಡಿದ್ದಾರೆ. ಅಮೆರಿಕಾದ ಫೀನಿಕ್ಸ್ ಮಹಾನಗರದಲ್ಲಿರುವ ಕೃಷ್ಣಮಂದಿರದಲ್ಲಿ ಅಣ್ಣಾಮಲೈ ಪೂಜೆ ಸಲ್ಲಿಸಿದ್ದಾರೆ.

ಅಮೆರಿಕಾದ ವಿಶ್ವವಿದ್ಯಾಲಯಗಳಲ್ಲಿ ಉಪನ್ಯಾಸ ನೀಡಲು ತೆರಳಿದ್ದ ಅಣ್ಣಾಮಲೈ ಈ ವೇಳೆ ಕಾರ್ಯಕ್ರಮ ಸಂಯೋಜಕರ ಬಳಿ ಮಾಹಿತಿ ಪಡೆದು ಕೃಷ್ಣ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಉಡುಪಿಯ ಶ್ರೀ ಪುತ್ತಿಗೆ ಮಠದ ಶ್ರೀ ಕೃಷ್ಣ ಮಂದಿರ ಅಮೆರಿಕದಲ್ಲಿದೆ. ಈ ದೇವಾಲಯದ ವೈಭವ ಹಾಗೂ ಪೂಜಾ ಶೈಲಿಯನ್ನು ಕೊಂಡಾಡಿದ ಅಣ್ಣಾಮಲೈ ಪೂಜೆ ಸಲ್ಲಿಸಿದ ಬಳಿಕ ಪ್ರಸಾದ ಸ್ವೀಕರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More