ಜೂನ್ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಇದು ವಿಜಯ್ ಅವರ ಮೂಕಾಂಬಿಕೆ ಕ್ಷೇತ್ರಕ್ಕೆ ಮೊದಲ ಭೇಟಿಯಾಗಿದೆ. ಶುಕ್ರವಾರ ಮಧ್ಯಾಹ್ನ ಉಡುಪಿಗೆ ಆಗಮಿಸಿ, 3 ಗಂಟೆಗೆ ಮೂಕಾಂಬಿಕೆ ಸನ್ನಿಧಿಗೆ ತೆರಳಲಿದ್ದಾರೆ. ದರ್ಶನದ ನಂತರ ಸಂಜೆ ಮಂಗಳೂರು ವಿಮಾನ ನಿಲ್ದಾಣದಿಂದ ಚೆನ್ನೈಗೆ ವಾಪಸ್ಸಾಗಲಿದ್ದಾರೆ.
ಉಡುಪಿ, ಜೂನ್ 10: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಜೂನ್ 12 (ಶುಕ್ರವಾರ) ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಕ್ಷೇತ್ರಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಶುಕ್ರವಾರ ಮಧ್ಯಾಹ್ನ ಉಡುಪಿಗೆ ಆಗಮಿಸಲಿರುವ ವಿಜಯ್ ಅವರು, ಮಧ್ಯಾಹ್ನ 3 ಗಂಟೆಗೆ ಬೈಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತಲುಪಲಿದ್ದಾರೆ. ದೇವಿಯ ದರ್ಶನ ಮತ್ತು ಪೂಜಾ ಕೈಂಕರ್ಯಗಳನ್ನು ಪೂರೈಸಿದ ನಂತರ, ಅಂದೇ ಸಂಜೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚೆನ್ನೈಗೆ ವಾಪಸಾಗಲಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು

