AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​: ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಪ್ರಯಾಣ

ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​: ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಪ್ರಯಾಣ

ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Jun 12, 2026 | 1:52 PM

Share

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದರು. ಆರೋಗ್ಯ ಸಚಿವ ಯು.ಟಿ. ಖಾದರ್ ವಿಜಯ್ ಅವರನ್ನು ಸ್ವಾಗತಿಸಿದರು. ಬಳಿಕ ಜೋಸೆಫ್ ವಿಜಯ್ ರಸ್ತೆ ಮಾರ್ಗವಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ದೇವಿಯ ದರ್ಶನ ಪಡೆಯಲು ತೆರಳಿದರು.

ಮಂಗಳೂರು, ಜೂನ್ 12: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ವಿಜಯ್ ಅವರಿಗೆ ವಿಮಾನ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ಆರೋಗ್ಯ ಸಚಿವ ಯುಟಿ ಖಾದರ್ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ವಿಜಯ್ ಭೇಟಿಯ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರೊಂದಿಗೆ ತಮಿಳುನಾಡು ಪೊಲೀಸರು ಸಹ ಸೇರಿ ಹೈ-ಸೆಕ್ಯೂರಿಟಿ ಒದಗಿಸಿದ್ದಾರೆ. ವಿಮಾನ ನಿಲ್ದಾಣದಿಂದ ಹೊರಬಂದ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಭದ್ರತಾ ದೃಷ್ಟಿಯಿಂದ ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಪ್ರಯಾಣ

ಮಂಗಳೂರು ಏರ್‌ಪೋರ್ಟ್‌ನಿಂದ ವಿಜಯ್ ನೇರವಾಗಿ ರಸ್ತೆ ಮಾರ್ಗದ ಮೂಲಕ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ತೆರಳಿದರು. ಮಂಗಳೂರಿನಿಂದ ಸುಮಾರು 125 ಕಿ.ಮೀ ದೂರದ ಕೊಲ್ಲೂರಿಗೆ ರಸ್ತೆ ಮೂಲಕವೇ ಪ್ರಯಾಣ ಬೆಳೆಸಲಿರುವ ಅವರು, ಸಂಜೆ ಹೊತ್ತಿಗೆ ದೇವಸ್ಥಾನಕ್ಕೆ ತಲುಪಲಿದ್ದಾರೆ. ಅಲ್ಲಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us