Video: ಜೋಸೆಫ್ ವಿಜಯ್ ಆಡಳಿತ ಆರಂಭ; ‘ಉಚಿತ ವಿದ್ಯುತ್’ ಯೋಜನೆಗೆ ಸಹಿ ಹಾಕಿದ ನೂತನ ಮುಖ್ಯಮಂತ್ರಿ

Updated on: May 10, 2026 | 12:01 PM

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಗೃಹ ವಿದ್ಯುತ್ ಗ್ರಾಹಕರಿಗೆ 200 ಯೂನಿಟ್​ಗಳವರೆಗೆ ಉಚಿತ ವಿದ್ಯುತ್ ನೀಡಲು ಆದೇಶಿಸಿದ್ದಾರೆ. ಮಹಿಳೆಯರ ಸುರಕ್ಷತೆಗಾಗಿ ಸಿಂಗಪೆಣ್ ವಿಶೇಷ ಕಾರ್ಯಪಡೆ ರಚನೆ ಮತ್ತು ಮಾದಕ ವಸ್ತುಗಳಿಗೆ ಸಂಬಂಧಿಸಿದ ಅಪರಾಧಗಳನ್ನು ನಿಯಂತ್ರಿಸಲು ಎಲ್ಲಾ ಜಿಲ್ಲೆಗಳಲ್ಲಿ ಮಾದಕ ವಸ್ತು ತಡೆ ದಳದ ಘಟಕಗಳನ್ನು ಸ್ಥಾಪಿಸಲು ಸೂಚಿಸಿದ್ದಾರೆ. ಈ ಆದೇಶಗಳು ರಾಜ್ಯದ ಜನತೆಗೆ ಅನುಕೂಲ ಒದಗಿಸಲಿವೆ.

ತಮಿಳುನಾಡು, ಮೇ 10: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಜೋಸೆಫ್ ವಿಜಯ್ ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ರಾಜ್ಯದ ಜನತೆಗೆ ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದ್ದಾರೆ. ಗೃಹ ವಿದ್ಯುತ್ ಗ್ರಾಹಕರ ಹಿತದೃಷ್ಟಿಯಿಂದ ಎರಡು ತಿಂಗಳಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವ ಮಹತ್ವದ ಯೋಜನೆಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕರ ಸಮ್ಮುಖದಲ್ಲೇ ಈ ಐತಿಹಾಸಿಕ ಆದೇಶಕ್ಕೆ ವಿಜಯ್ ಮೊದಲ ಸಹಿ ಹಾಕಿದ್ದಾರೆ. ಈ ಮೂಲಕ ತಮ್ಮ ಆಡಳಿತದ ಆರಂಭದಲ್ಲೇ ಜನಪರ ಕಲ್ಯಾಣ ಯೋಜನೆಗಳಿಗೆ ಆದ್ಯತೆ ನೀಡುವ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಇದನ್ನೂ ಓದಿ: ವಿಜಯ್ ಪ್ರಮಾಣವಚನ: ನಗುನಗುತ್ತಾ ಆಗಮಿಸಿದ ನಟಿ ತ್ರಿಶಾ ವಿಡಿಯೋ ವೈರಲ್

Published on: May 10, 2026 12:01 PM
Follow Us