AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಲೂರು ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್

ಕೊಲ್ಲೂರು ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Jun 12, 2026 | 5:58 PM

Share

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಗೆ ಬೆಳ್ಳಿ ಖಡ್ಗವನ್ನು ಸಮರ್ಪಿಸಿದರು. ಹಿಂದಿನ ಸಿಎಂಗಳಾದ ಎಂಜಿಆರ್ ಅವರಂತೆ, ವಿಜಯ್ ಕೂಡ ಸಾಂಪ್ರದಾಯಿಕ ಉಡುಗೆಯಲ್ಲಿ ಆಗಮಿಸಿ, ದೇವಿಯ ದರ್ಶನ ಪಡೆದು ಭಕ್ತಿ ಮೆರೆದರು. ಇದು ತಮಿಳುನಾಡು ರಾಜಕೀಯ ನಾಯಕರ ದೀರ್ಘಕಾಲದ ಸಂಪ್ರದಾಯವನ್ನು ಮುಂದುವರಿಸಿದೆ.

ಉಡುಪಿ, ಜೂ.12: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ವಿಶ್ವಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇದೇ ವೇಳೆ ಅವರು ಮೂಕಾಂಬಿಕಾ ದೇವಿಗೆ ಭಕ್ತಿಯಿಂದ ಬೆಳ್ಳಿಯ ಖಡ್ಗವನ್ನು ಕಾಣಿಕೆಯಾಗಿ ಸಮರ್ಪಿಸಿದರು. ದೇಗುಲಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರು ಸಾಂಪ್ರದಾಯಿಕ ಸ್ವಾಗತ ಕೋರಿದರು. ಸುಮಾರು 30 ನಿಮಿಷಗಳ ಕಾಲ ದೇವಾಲಯದ ಆವರಣದಲ್ಲಿ ಕಳೆದ ಅವರು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು ಎಂದು ಅಲ್ಲಿ ಅರ್ಚಕರು ಹೇಳಿದರು. ಈ ಹಿಂದೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ಎಂ.ಜಿ. ರಾಮಚಂದ್ರನ್ (MGR) ಅವರು ಕೊಲ್ಲೂರು ಮೂಕಾಂಬಿಕಾ ದೇವಿಗೆ ಚಿನ್ನದ ಖಡ್ಗವನ್ನು ಕಾಣಿಕೆಯಾಗಿ ನೀಡಿದ್ದರು. ತಮಗಿಂತ ಮುಂಚೆ ತಮಿಳುನಾಡನ್ನು ಆಳಿದ ಧೀಮಂತ ನಾಯಕ ನೀಡಿದ್ದ ಆ ಐತಿಹಾಸಿಕ ಚಿನ್ನದ ಖಡ್ಗವನ್ನು ಸಿಎಂ ವಿಜಯ್ ಅವರು ಕುತೂಹಲದಿಂದ ವೀಕ್ಷಿಸಿ, ಅದರ ಹಿನ್ನೆಲೆಯನ್ನು ಅಧಿಕಾರಿಗಳಿಂದ ಕೇಳಿ ತಿಳಿದುಕೊಂಡರು. ತಮಿಳುನಾಡು ಮುಖ್ಯಮಂತ್ರಿ ಬರುವ ವಿಷಯ ತಿಳಿದು ಕೊಲ್ಲೂರು ದೇಗುಲದ ಬಳಿ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್ ಅಮೀನ್​, ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More