AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್​ಗಿರೋ ಆಯ್ಕೆಗಳ ಬಗ್ಗೆ ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಸೂರಜ್ ಹೆಗ್ಡೆ ಹೇಳಿದ್ದಿಷ್ಟು

ವಿಜಯ್​ಗಿರೋ ಆಯ್ಕೆಗಳ ಬಗ್ಗೆ ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಸೂರಜ್ ಹೆಗ್ಡೆ ಹೇಳಿದ್ದಿಷ್ಟು

ಹರೀಶ್ ಜಿ.ಆರ್​.
| Edited By: |

Updated on: May 08, 2026 | 3:51 PM

Share

ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಸೂರಜ್ ಹೆಗ್ಡೆ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಎಲ್ಲಾ ಸೆಕ್ಯುಲರ್ ಫೋರ್ಸಸ್, ಅದು ಒಂದು ಕಡೆ ಬರಬೇಕಾಗುತ್ತೆ. ಹಾಗಾಗಿ ಟಿವಿಕೆಗೆ ಬೆಂಬಲ. ಇಲ್ಲದೆ ಇದ್ರೆ ಇವರು ಬೇರೆ ರೀತಿ ಇಲ್ಲಿ ಬೇರೆ ತರ ಸಪೋರ್ಟ್ ಕೊಡೋಕೆ ಹೋಗಿದ್ರು. ಅವರ ಸಪೋರ್ಟ್ ಕೊಟ್ರೆ ಗವರ್ನರ್ ಅವರನ್ನ ಕರೆಯೋಕು ರೆಡಿಯಾಗಿದ್ದರು. ಈಗ ಗವರ್ನರ್ ಯಾಕೆ ಕರೆಯುತ್ತಿಲ್ಲ, ಯಾಕೆ ಅವಕಾಶ ಕೊಡುತ್ತಿಲ್ಲ. ಕಾಂಗ್ರೆಸ್ ಬೆಂಬಲ ಕೊಟ್ಟಿದೆ ಅನ್ನುವಂತಹ ಒಂದೇ ಕಾರಣಕ್ಕೆ ಗವರ್ನರ್ ಅವಕಾಶ ಮಾಡಿಕೊಡುತ್ತಿಲ್ಲ.ಇದೇ ರೀತಿ ಕರ್ನಾಟಕದಲ್ಲಿ ಆದಾಗ ಯಡಿಯೂರಪ್ಪನವರಿಗೆ ಅವಕಾಶ ಕೊಟ್ಟಿರಲಿಲ್ವ? ಎಂದು ಪ್ರಶ್ನಿಸಿದರು.

ಚೆನ್ನೈ, (ಮೇ 08): ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶದ  (Tamil Nadu Assembly Election Result)  ನಂತರ ಸರ್ಕಾರ ರಚನೆಯ ಕಸರತ್ತು ಈಗ ರೋಚಕ ಹಂತಕ್ಕೆ ತಲುಪಿದೆ. ನಟ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ TVK ಪಕ್ಷವು ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ, ಬಹುಮತ ಸಾಬೀತುಪಡಿಸುವ ಸವಾಲು ಎದುರಾಗಿದೆ. ಎರಡು ಬಾರಿ ​ರಾಜ್ಯಪಾಲರನ್ನು ಭೇಟಿ ಮಾಡಿ ಹಕ್ಕು ಮಂಡಿಸಿದ್ರು ಕೂಡ, ಬಹುಮತ ಇಲ್ಲದ ಕಾರಣ ರಾಜ್ಯಪಾಲರು ಒಪ್ಪಿಗೆ ಸೂಚಿಸಿಲ್ಲ, ಇದು ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಇನ್ನು ಈ ಬಗ್ಗೆ ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಸೂರಜ್ ಹೆಗ್ಡೆ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಎಲ್ಲಾ ಸೆಕ್ಯುಲರ್ ಫೋರ್ಸಸ್, ಅದು ಒಂದು ಕಡೆ ಬರಬೇಕಾಗುತ್ತೆ. ಹಾಗಾಗಿ ಟಿವಿಕೆಗೆ ಬೆಂಬಲ. ಇಲ್ಲದೆ ಇದ್ರೆ ಇವರು ಬೇರೆ ರೀತಿ ಇಲ್ಲಿ ಬೇರೆ ತರ ಸಪೋರ್ಟ್ ಕೊಡೋಕೆ ಹೋಗಿದ್ರು. ಅವರ ಸಪೋರ್ಟ್ ಕೊಟ್ರೆ ಗವರ್ನರ್ ಅವರನ್ನ ಕರೆಯೋಕು ರೆಡಿಯಾಗಿದ್ದರು. ಈಗ ಗವರ್ನರ್ ಯಾಕೆ ಕರೆಯುತ್ತಿಲ್ಲ, ಯಾಕೆ ಅವಕಾಶ ಕೊಡುತ್ತಿಲ್ಲ. ಕಾಂಗ್ರೆಸ್ ಬೆಂಬಲ ಕೊಟ್ಟಿದೆ ಅನ್ನುವಂತಹ ಒಂದೇ ಕಾರಣಕ್ಕೆ ಗವರ್ನರ್ ಅವಕಾಶ ಮಾಡಿಕೊಡುತ್ತಿಲ್ಲ.ಇದೇ ರೀತಿ ಕರ್ನಾಟಕದಲ್ಲಿ ಆದಾಗ ಯಡಿಯೂರಪ್ಪನವರಿಗೆ ಅವಕಾಶ ಕೊಟ್ಟಿರಲಿಲ್ವ? ಎಂದು ಪ್ರಶ್ನಿಸಿದರು.

ಇದೇ ರೀತಿ ಮಹಾರಾಷ್ಟ್ರದಲ್ಲಿ ಆದಾಗ ಇದೇ ರೀತಿ ಗೋವಾದಲ್ಲಿ ಆದಾಗ ಯಾಕೆ ಕರೆದ್ರು? ಇವರು ಒಂದೊಂದು ರಾಜ್ಯಕ್ಕೆ ಒಂದೊಂದು ತಾರತಮ್ಯ ಮಾಡೋಕೆ ಆಗಲ್ಲ. ಇದು ನಮ್ಮ ಸಂವಿಧಾನ ಏನ್ ಹೇಳುತ್ತೆ ಅದರ ಪ್ರಕಾರ ನಡೆದುಕೊಂಡು ಹೋಗಬೇಕಾಗುತ್ತೆ. ನಾವು ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡುತ್ತೇವೆ. ನಾವು ಚುನಾವಣೆಗೆ ಹೋಗಲು ಸಿದ್ಧ, ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ‌ ಹೊಸದಲ್ಲ. ಡಿಎಂಕೆ – ಎಐಎಡಿಎಂಕೆ ಒಂದಾದ್ರೆ ಅವರನ್ನು ಹೇಗೆ ಸರಕಾರ ರಚಿಸಲು ಕರೆಯುತ್ತಾರೆ? ಅವರಲ್ಲಿ ಬಹುಮತ ಇದೆಯಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ನೋಡಿ: ತಮಿಳುನಾಡಿನಲ್ಲಿ ಸರ್ಕಾರ ರಚನೆ ಮಾಡುವವರ್ಯಾರು? ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More