AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ

ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ

ಸುಷ್ಮಾ ಚಕ್ರೆ
|

Updated on: May 07, 2026 | 10:02 PM

Share

ಈ ವೇಳೆ ಮಾತನಾಡಿದ ಎಂ.ಕೆ ಸ್ಟಾಲಿನ್, "ಉತ್ತಮ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುವುದು ನನ್ನ ಆಸೆ. ಆದರೆ ಕೆಲವು ನಿರ್ಧಾರಗಳನ್ನು ಪಕ್ಷದ ಹಿತದೃಷ್ಟಿಯಿಂದ ತೆಗೆದುಕೊಳ್ಳಬೇಕಾಗುತ್ತದೆ. ಯಾವುದೇ ನಿರ್ಧಾರ ತೆಗೆದುಕೊಂಡರೂ, ಸದಸ್ಯರು ಅದಕ್ಕೆ ಬದ್ಧರಾಗಿರಬೇಕು. ಸದ್ಯದಲ್ಲೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ನಮ್ಮ ಪಕ್ಷದ ಎಲ್ಲ ಶಾಸಕರು ಮೇ 10ರವರೆಗೆ ಚೆನ್ನೈನಲ್ಲಿಯೇ ಇರಬೇಕು" ಎಂದು ಆದೇಶಿಸಿದ್ದಾರೆ.

ಚೆನ್ನೈ, ಮೇ 7: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ. ಸದ್ಯಕ್ಕೆ ಚೆಂಡು ಟಿವಿಕೆ ಮುಖ್ಯಸ್ಥ ವಿಜಯ್ (Vijay) ಅವರ ಮೈದಾನದಲ್ಲಿದ್ದರೂ ಯಾರು ಬಹುಮತ ಸಾಬೀತುಪಡಿಸುತ್ತಾರೋ ಅವರಿಗೆ ಸರ್ಕಾರ ರಚಿಸುವ ಅವಕಾಶ ಸಿಗಲಿದೆ. ಹೀಗಾಗಿ, ಡಿಎಂಕೆ ಮತ್ತು ಎಐಎಡಿಎಂಕೆ ಕೂಡ ತಮ್ಮ ಪಕ್ಷದ ಶಾಸಕರ ಜೊತೆ ಸಭೆಗಳನ್ನು ನಡೆಸುತ್ತಿದ್ದಾರೆ. ಡಿಎಂಕೆ ವಿಧಾನಸಭಾ ಶಾಸಕರು ಇಂದು ಪಕ್ಷದ ನಾಯಕ ಎಂ.ಕೆ. ಸ್ಟಾಲಿನ್ (MK Stalin) ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಈ ವೇಳೆ ಮಾತನಾಡಿದ ಎಂ.ಕೆ ಸ್ಟಾಲಿನ್, “ಉತ್ತಮ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುವುದು ನನ್ನ ಆಸೆ. ಆದರೆ ಕೆಲವು ನಿರ್ಧಾರಗಳನ್ನು ಪಕ್ಷದ ಹಿತದೃಷ್ಟಿಯಿಂದ ತೆಗೆದುಕೊಳ್ಳಬೇಕಾಗುತ್ತದೆ. ಯಾವುದೇ ನಿರ್ಧಾರ ತೆಗೆದುಕೊಂಡರೂ, ಸದಸ್ಯರು ಅದಕ್ಕೆ ಬದ್ಧರಾಗಿರಬೇಕು. ಸದ್ಯದಲ್ಲೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ನಮ್ಮ ಪಕ್ಷದ ಎಲ್ಲ ಶಾಸಕರು ಮೇ 10ರವರೆಗೆ ಚೆನ್ನೈನಲ್ಲಿಯೇ ಇರಬೇಕು” ಎಂದು ಆದೇಶಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us