AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿಕೆ ಮುಖ್ಯಸ್ಥ ವಿಜಯ್‌ಗೆ ರಾಹುಲ್​​ ಗಾಂಧಿ ಕರೆ: ಟಿವಿಕೆ ಜೊತೆ ಕಾಂಗ್ರೆಸ್​​​​ ಮೈತ್ರಿ?

ಟಿವಿಕೆ ಮುಖ್ಯಸ್ಥ ವಿಜಯ್‌ಗೆ ರಾಹುಲ್​​ ಗಾಂಧಿ ಕರೆ: ಟಿವಿಕೆ ಜೊತೆ ಕಾಂಗ್ರೆಸ್​​​​ ಮೈತ್ರಿ?

ಹರೀಶ್ ಜಿ.ಆರ್​.
| Edited By: |

Updated on:May 05, 2026 | 11:27 AM

Share

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವಿಜಯ್ ಅವರ TVK ಪಕ್ಷ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸರ್ಕಾರ ರಚನೆಗೆ ಅಗತ್ಯ ಬಹುಮತ ಪಡೆಯಲು ಸಣ್ಣ ಪಕ್ಷಗಳ ಬೆಂಬಲ ಕೋರುತ್ತಿದೆ. ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರು ವಿಜಯ್‌ಗೆ ಕರೆ ಮಾಡಿ ಅಭೂತಪೂರ್ವ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದು, ಮೈತ್ರಿಯ ಸಾಧ್ಯತೆಗಳಿಗೆ ದಾರಿ ಮಾಡಿಕೊಟ್ಟಿದೆ. TVK ಈಗಾಗಲೇ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

ಚೆನ್ನೈ, ಮೇ 05: ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಫಲಿತಾಂಶದ ಬಳಿಕ ವಿಜಯ್ ಅವರ TVK ಪಕ್ಷ ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 108 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷ ಎನಿಸಿಕೊಂಡಿದ್ದರೂ, ಸರ್ಕಾರ ರಚನೆಗೆ ಅಗತ್ಯವಿರುವ 118 ಸ್ಥಾನಗಳ ಮ್ಯಾಜಿಕ್ ಸಂಖ್ಯೆಗೆ 10 ಸ್ಥಾನಗಳ ಕೊರತೆ ಇದೆ. ಈ ಹಿನ್ನೆಲೆಯಲ್ಲಿ, TVK ಸರ್ಕಾರ ರಚನೆಗೆ ತನ್ನ ಹಕ್ಕನ್ನು ಮಂಡಿಸಲು ಸಣ್ಣ ಪಕ್ಷಗಳ ಬೆಂಬಲವನ್ನು ಕೋರಿದೆ. TVK ಪ್ರಧಾನ ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ಈಗಾಗಲೇ ರಾಜಭವನಕ್ಕೆ ತೆರಳಿ ಸರ್ಕಾರ ರಚನೆಗೆ ಮನವಿ ಸಲ್ಲಿಸಿದ್ದಾರೆ. ವಿಜಯ್ ಅವರು ರಾಜ್ಯಪಾಲರ ಭೇಟಿಗೆ ಸಮಯವನ್ನೂ ಕೇಳಿದ್ದಾರೆ. ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿಜಯ್‌ಗೆ ಕರೆ ಮಾಡಿ ಅಭೂತಪೂರ್ವ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದು, ಇದು ಮೈತ್ರಿಯ ಹೊಸ ಸಾಧ್ಯತೆಗಳಿಗೆ ಮುನ್ಸೂಚನೆ ನೀಡಿದೆ. ಕಾಂಗ್ರೆಸ್ 5 ಸ್ಥಾನಗಳನ್ನು ಗೆದ್ದಿದ್ದು, TVKಗೆ ಬೆಂಬಲ ನೀಡುವ ಕುರಿತು ಚರ್ಚೆಗಳು ನಡೆಯುತ್ತಿವೆ. PMK ಸಹ 4 ಸ್ಥಾನಗಳನ್ನು ಗೆದ್ದಿದ್ದು, ಇವರ ಬೆಂಬಲವೂ ನಿರ್ಣಾಯಕವಾಗಬಲ್ಲದು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: May 05, 2026 11:24 AM
Follow Us