AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ

ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ

ಸುಷ್ಮಾ ಚಕ್ರೆ
|

Updated on: May 25, 2026 | 9:42 PM

Share

ಕೊಯಮತ್ತೂರಿನ ತೊಂಡಮುತ್ತೂರು ಬಳಿಯ ಕಾಳಿಕ್ಕನೈಕ್ಕನ್‌ಪಾಳ್ಯಂನಲ್ಲಿರುವ ಮಹಿಳೆಯ ಮನೆಯ ಮೇಲೆ ಒಂದು ಗ್ಯಾಂಗ್ 2 ಬಾಂಬ್‌ಗಳನ್ನು ಎಸೆದಿದೆ ಎಂದು ಆರೋಪಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ತೊಂಡಮುತ್ತೂರು ಪೊಲೀಸರು ಸ್ಥಳಕ್ಕೆ ಧಾವಿಸಿದರು. ಅವರು ಈ ವಿಷಯದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಮತ್ತು ತನಿಖೆ ನಡೆಸುತ್ತಿದ್ದಾರೆ. ಶೀಘ್ರದಲ್ಲೇ ಅಪರಾಧಿಗಳನ್ನು ಹಿಡಿಯುವ ಭರವಸೆ ಪೊಲೀಸರು ಹೊಂದಿದ್ದಾರೆ.

ಕೊಯಮತ್ತೂರು, ಮೇ 25: ತಮಿಳುನಾಡಿನ ಕೊಯಮತ್ತೂರಿನಲ್ಲಿ (Coimbatore) ಯುವತಿಯೊಬ್ಬರು ಪುರುಷನ ಪ್ರಪೋಸಲ್ ನಿರಾಕರಿಸಿದ ಕಾರಣದಿಂದ ಆತ ತನ್ನ ಗ್ಯಾಂಗ್ ಜೊತೆ ಸೇರಿ ಆಕೆಯ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ. ಆ ಯುವತಿ ಸ್ವಲ್ಪ ಸಮಯದಿಂದ ಅವನೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದರು. ಆದರೆ ಇತ್ತೀಚೆಗೆ ಅವನ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದರಿಂದ ಆಕೆ ಅವನೊಂದಿಗಿನ ಸಂಬಂಧವನ್ನು ಕಡಿದುಕೊಳ್ಳಲು ನಿರ್ಧರಿಸಿದರು. ಇದು ಆ ವ್ಯಕ್ತಿಯನ್ನು ಕೆರಳಿಸಿತು.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಆ ಯುವತಿ ಕಾಳಿಕ್ಕನೈಕ್ಕನ್‌ಪಾಳ್ಯಂನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಎರಡನೇ ವರ್ಷದ ವಿದ್ಯಾರ್ಥಿನಿ. ಅವರು ಚೆನ್ನೈನ ಕಾರ್ತಿ ಎಂಬ ವ್ಯಕ್ತಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹ ಬೆಳೆಸಿಕೊಂಡಿದ್ದರು. ಬಳಿಕ ಅವರಿಬ್ಬರೂ ಪ್ರೀತಿಸತೊಡಗಿದ್ದರು. ಆದರೆ, ಇತ್ತೀಚೆಗೆ ಆ ಯುವತಿಗೆ ಕಾರ್ತಿ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದು ಗೊತ್ತಾಯಿತು. ಹೀಗಾಗಿ ಆಕೆ ತಕ್ಷಣವೇ ಅವನೊಂದಿಗಿನ ಎಲ್ಲ ಸಂಬಂಧಗಳನ್ನು ಕಡಿದುಕೊಳ್ಳಲು ನಿರ್ಧರಿಸಿದರು. ಇದರಿಂದ ಕೋಪಗೊಂಡ ಕಾರ್ತಿ ತನ್ನ ಸ್ನೇಹಿತರೊಂದಿಗೆ ಆಕೆಯ ಮನೆಗೆ ಹೋಗಿ ಪೆಟ್ರೋಲ್ ಬಾಂಬ್‌ಗಳನ್ನು ಎಸೆದು ಪರಾರಿಯಾಗಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More