ತಮಿಳುನಾಡಿನಲ್ಲಿ TVK ಸರ್ಕಾರ ರಚನೆ ಬಹುತೇಕ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡು ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಶುರುವಾದ ರಾಜಕೀಯ ಹೈಡ್ರಾಮಾ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಸರ್ಕಾರ ರಚಿಸಲು ಟಿವಿಕೆಗೆ ಅಗತ್ಯವಾದ ಮ್ಯಾಜಿಕ್ ನಂಬರ್ 118 ಲಭಿಸಿದೆ. ಹೀಗಾಗಿ ವಿಜಯ್ ಸರ್ಕಾರ ಅಸ್ತಿತ್ವಕ್ಕೆ ಬರುವುದು ನಿಶ್ಚಿತವಾಗಿದೆ. ಹೌದು.. ವಿಜಯ್ ಅವರು ತಮ್ಮ 107 ಸ್ಥಾನಗಳ ಜೊತೆಗೆ ಕಾಂಗ್ರೆಸ್ನ 5, ವಿಸಿಕೆ 2, ಸಿಪಿಐ 2, ಸಿಪಿಐ(ಎಂ) 2 ಸ್ಥಾನ ಸೇರಿ 118 ಸ್ಥಾನವನ್ನು ಹೊಂದಿಸುವಲ್ಲಿ ಯಶಸ್ವಿಯಾಗಿದ್ದು, ಸದ್ಯದಲ್ಲೇ ವಿಜಯ್ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ.
ಚೆನ್ನೈ, (ಮೇ 8): ತಮಿಳುನಾಡು (Tamil Nadu) ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಶುರುವಾದ ರಾಜಕೀಯ ಹೈಡ್ರಾಮಾ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಸರ್ಕಾರ ರಚಿಸಲು ಟಿವಿಕೆಗೆ ಅಗತ್ಯವಾದ ಮ್ಯಾಜಿಕ್ ನಂಬರ್ 118 ಲಭಿಸಿದೆ. ಹೀಗಾಗಿ ವಿಜಯ್ ಸರ್ಕಾರ ಅಸ್ತಿತ್ವಕ್ಕೆ ಬರುವುದು ನಿಶ್ಚಿತವಾಗಿದೆ. ಹೌದು.. ವಿಜಯ್ ಅವರು ತಮ್ಮ 107 ಸ್ಥಾನಗಳ ಜೊತೆಗೆ ಕಾಂಗ್ರೆಸ್ನ 5, ವಿಸಿಕೆ 2, ಸಿಪಿಐ 2, ಸಿಪಿಐ(ಎಂ) 2 ಸ್ಥಾನ ಸೇರಿ 118 ಸ್ಥಾನವನ್ನು ಹೊಂದಿಸುವಲ್ಲಿ ಯಶಸ್ವಿಯಾಗಿದ್ದು, ಸದ್ಯದಲ್ಲೇ ವಿಜಯ್ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ.
ತಮಿಳಿಗ ವೆಟ್ರಿ ಕಳಗಂ ಪಕ್ಷ ಸರ್ಕಾರ ರಚನೆಗೆ ಎಡಪಕ್ಷಗಳ ಬೆಂಬಲ ಘೋಷಿಸಿವೆ. ಸಿಪಿಐ, ಸಿಪಿಐ(ಎಂ) ತಲಾ 2 ಕ್ಷೇತ್ರದಲ್ಲಿ ಗೆದ್ದಿದ್ದು, ಟಿವಿಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ಬರೆದಿವೆ. ಇದರ ಬೆನ್ನಲ್ಲೇ ವಿಜಯ್ ರಾಜ್ಯಪಾಲರಿಗೆ ಪತ್ರ ಬರೆದಿದ್ದು, ತಮಗೆ 121 ಶಾಸಕರ ಬೆಂಬಲವಿದೆ . ಟಿವಿಕೆಗೆ ಕಾಂಗ್ರೆಸ್, ಮುಸ್ಲಿಂ ಲೀಗ್, ಸಿಪಿಐ, ಸಿಪಿಐ(ಎಂ)ನಿಂದಲೂ ಬೆಂಬಲವಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ತಮಿಳುನಾಡಿನಲ್ಲಿ ಇನ್ಮುಂದೆ ವಿಜಯ್ ‘ಸರ್ಕಾರ್’; ಕೊನೆಗೂ ಟಿವಿಕೆಗೆ ಸಿಕ್ಕಿತು ಮ್ಯಾಜಿಕ್ ನಂಬರ್
Published on: May 08, 2026 05:05 PM
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್ಗೆ ಡಿಕೆಶಿ ಕೌಂಟರ್
ಹೆಚ್ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ

