ತಮಿಳುನಾಡಿನಲ್ಲಿ TVK ಸರ್ಕಾರ ರಚನೆ ಬಹುತೇಕ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

Edited By:

Updated on: May 08, 2026 | 5:12 PM

ತಮಿಳುನಾಡು ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಶುರುವಾದ ರಾಜಕೀಯ ಹೈಡ್ರಾಮಾ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಸರ್ಕಾರ ರಚಿಸಲು ಟಿವಿಕೆಗೆ ಅಗತ್ಯವಾದ ಮ್ಯಾಜಿಕ್‌ ನಂಬರ್‌ 118 ಲಭಿಸಿದೆ. ಹೀಗಾಗಿ ವಿಜಯ್ ಸರ್ಕಾರ ಅಸ್ತಿತ್ವಕ್ಕೆ ಬರುವುದು ನಿಶ್ಚಿತವಾಗಿದೆ. ಹೌದು.. ವಿಜಯ್ ಅವರು ತಮ್ಮ 107 ಸ್ಥಾನಗಳ ಜೊತೆಗೆ ಕಾಂಗ್ರೆಸ್​​ನ 5, ವಿಸಿಕೆ 2, ಸಿಪಿಐ 2, ಸಿಪಿಐ(ಎಂ) 2 ಸ್ಥಾನ ಸೇರಿ 118 ಸ್ಥಾನವನ್ನು ಹೊಂದಿಸುವಲ್ಲಿ ಯಶಸ್ವಿಯಾಗಿದ್ದು, ಸದ್ಯದಲ್ಲೇ ವಿಜಯ್‌ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ.

ಚೆನ್ನೈ, (ಮೇ 8): ತಮಿಳುನಾಡು (Tamil Nadu) ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಶುರುವಾದ ರಾಜಕೀಯ ಹೈಡ್ರಾಮಾ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಸರ್ಕಾರ ರಚಿಸಲು ಟಿವಿಕೆಗೆ ಅಗತ್ಯವಾದ ಮ್ಯಾಜಿಕ್‌ ನಂಬರ್‌ 118 ಲಭಿಸಿದೆ. ಹೀಗಾಗಿ ವಿಜಯ್ ಸರ್ಕಾರ ಅಸ್ತಿತ್ವಕ್ಕೆ ಬರುವುದು ನಿಶ್ಚಿತವಾಗಿದೆ. ಹೌದು.. ವಿಜಯ್ ಅವರು ತಮ್ಮ 107 ಸ್ಥಾನಗಳ ಜೊತೆಗೆ ಕಾಂಗ್ರೆಸ್​​ನ 5, ವಿಸಿಕೆ 2, ಸಿಪಿಐ 2, ಸಿಪಿಐ(ಎಂ) 2 ಸ್ಥಾನ ಸೇರಿ 118 ಸ್ಥಾನವನ್ನು ಹೊಂದಿಸುವಲ್ಲಿ ಯಶಸ್ವಿಯಾಗಿದ್ದು, ಸದ್ಯದಲ್ಲೇ ವಿಜಯ್‌ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ.

ತಮಿಳಿಗ ವೆಟ್ರಿ ಕಳಗಂ ಪಕ್ಷ ಸರ್ಕಾರ ರಚನೆಗೆ ಎಡಪಕ್ಷಗಳ ಬೆಂಬಲ ಘೋಷಿಸಿವೆ. ಸಿಪಿಐ, ಸಿಪಿಐ(ಎಂ) ತಲಾ 2 ಕ್ಷೇತ್ರದಲ್ಲಿ ಗೆದ್ದಿದ್ದು, ಟಿವಿಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ಬರೆದಿವೆ. ಇದರ ಬೆನ್ನಲ್ಲೇ ವಿಜಯ್ ರಾಜ್ಯಪಾಲರಿಗೆ ಪತ್ರ ಬರೆದಿದ್ದು, ತಮಗೆ 121 ಶಾಸಕರ ಬೆಂಬಲವಿದೆ . ಟಿವಿಕೆಗೆ ಕಾಂಗ್ರೆಸ್, ಮುಸ್ಲಿಂ ಲೀಗ್​, ಸಿಪಿಐ, ಸಿಪಿಐ(ಎಂ)ನಿಂದಲೂ ಬೆಂಬಲವಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಇನ್ಮುಂದೆ ವಿಜಯ್ ‘ಸರ್ಕಾರ್’; ಕೊನೆಗೂ ಟಿವಿಕೆಗೆ ಸಿಕ್ಕಿತು ಮ್ಯಾಜಿಕ್ ನಂಬರ್

Published on: May 08, 2026 05:05 PM
Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More