ಮಕ್ಕಳು ಸೇರಿದಂತೆ 31 ಜನರನ್ನು ಬಲಿ ಪಡೆದ ತಮಿಳುನಾಡಿನ ಚುನಾವಣಾ ರ್ಯಾಲಿ; 60ಕ್ಕೂ ಅಧಿಕ ಜನರ ಸ್ಥಿತಿ ಗಂಭೀರ
ಬೆಳಿಗ್ಗೆಯಿಂದ ವಿಜಯ್ ಅವರಿಗಾಗಿ ಕಾಯುತ್ತಿದ್ದ ಅವರಲ್ಲಿ ಹಲವರು ಬಿಸಿಲಿನ ತಾಪಕ್ಕೆ ಮೂರ್ಛೆ ಹೋದರು. ಬಳಿಕ ವಿಜಯ್ ಅವರ ಭಾಷಣದ ವೇಳೆ ಜನಸಂದಣಿಯಿಂದಾಗಿ 31 ಜನರು ಸಾವನ್ನಪ್ಪಿದ್ದಾರೆ. ಈ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ನಾಲ್ಕೈದು ಮಕ್ಕಳು, ಮಹಿಳೆಯರು ಸೇರಿದಂತೆ ಒಟ್ಟು 31ಕ್ಕೂ ಅಧಿಕ ಜನರು ಇದುವರೆಗೂ ಮೃತಪಟ್ಟಿದ್ದಾರೆ. ಅವರಲ್ಲಿ ಅನೇಕರನ್ನು ತಮಿಳುನಾಡಿನ ಕರೂರ್ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರೂರ್, ಸೆಪ್ಟೆಂಬರ್ 27: ತಮಿಳುನಾಡು ವೆಟ್ರಿ ಕಗಂ (ಟಿವಿಕೆ) ನಾಯಕ ವಿಜಯ್ ಇಂದು ತಮಿಳುನಾಡಿನ ಕರೂರಿನಲ್ಲಿ ಪ್ರಚಾರ ನಡೆಸಿದರು. ಈ ವೇಳೆ ಪ್ರಚಾರಕ್ಕಾಗಿ ಸಾವಿರಾರು ಜನರು ಒಂದೇ ಸ್ಥಳದಲ್ಲಿ ಜಮಾಯಿಸಿದರು. ಬೆಳಿಗ್ಗೆಯಿಂದ ವಿಜಯ್ ಅವರಿಗಾಗಿ ಕಾಯುತ್ತಿದ್ದ ಅವರಲ್ಲಿ ಹಲವರು ಬಿಸಿಲಿನ ತಾಪಕ್ಕೆ ಮೂರ್ಛೆ ಹೋದರು. ಬಳಿಕ ವಿಜಯ್ ಅವರ ಭಾಷಣದ ವೇಳೆ ಕಾಲ್ತುಳಿತ (Tamil Nadu Stampede) ಉಂಟಾಗಿ 31 ಜನರು ಸಾವನ್ನಪ್ಪಿದ್ದಾರೆ. ಈ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ನಾಲ್ಕೈದು ಮಕ್ಕಳು, ಮಹಿಳೆಯರು ಸೇರಿದಂತೆ ಒಟ್ಟು 31ಕ್ಕೂ ಅಧಿಕ ಜನರು ಇದುವರೆಗೂ ಮೃತಪಟ್ಟಿದ್ದಾರೆ. ಅವರಲ್ಲಿ ಅನೇಕರನ್ನು ತಮಿಳುನಾಡಿನ ಕರೂರ್ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರೂರಿನಲ್ಲಿ ಲಕ್ಷಾಂತರ ಜನರು ಬೆಳಿಗ್ಗೆಯಿಂದಲೇ ಕುಡಿಯುವ ನೀರು ಅಥವಾ ಆಹಾರವಿಲ್ಲದೆ ವಿಜಯ್ ಅವರನ್ನು ನೋಡಲು ಕಾಯುತ್ತಿದ್ದರು. ಗಾಳಿ ವ್ಯವಸ್ಥೆ ಇಲ್ಲದ ಕಾರಣ ಜನರು ಸುಸ್ತಾಗಿದ್ದರು. ಸಾವಿರಾರು ಜನರು ಸೇರಿದ್ದರಿಂದ ಅವರಿಗೆ ಅಲ್ಲಿಂದ ಹೊರಹೋಗಲು ಕೂಡ ಸಾಧ್ಯವಾಗಲಿಲ್ಲ. ವಿಜಯ್ ತಮ್ಮ ಭಾಷಣ ಮುಗಿಸಿದ ನಂತರ, ಜನರು ಹೊರಹೋಗಲು ಪ್ರಯತ್ನಿಸಿದಾಗ ಕಾಲ್ತುಳಿತ ಉಂಟಾಯಿತು. ಕಾಲ್ತುಳಿತದಲ್ಲಿ ಅನೇಕ ಜನರು ಸಿಲುಕಿಕೊಂಡು ಸಾವನ್ನಪ್ಪಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ