Video: ಟಿವಿಕೆಯ ಮೊದಲ ವಾರ್ಷಿಕೋತ್ಸವ, ಪ್ರಶಾಂತ್ ಕಿಶೋರ್ ಜತೆ ವೇದಿಕೆ ಹಂಚಿಕೊಂಡ ನಟ ದಳಪತಿ ವಿಜಯ್
ರಾಜಕೀಯ, ಸಿನಿಮಾ ರಂಗ ಒಂದಕ್ಕೊಂದು ಬಿಡಿಸಲಾಗದ ನಂಟು ಹೊಂದಿರುವ ತಮಿಳುನಾಡಿನಲ್ಲಿ ಸಿನಿಮಾ ಹಿನ್ನೆಲೆಯ ಮತ್ತೊಬ್ಬ ನಟ ದಳಪತಿ ವಿಜಯ್ ರಾಜಕಾರಣಕ್ಕೆ ಎಂಟ್ರಿ ಕೊಟ್ಟು ಇಂದಿಗೆ ಒಂದು ವರ್ಷ. ಖ್ಯಾತ ನಿರ್ದೇಶಕ ಎಸ್.ಎ. ಚಂದ್ರಶೇಖರ್ ಅವರ ಪುತ್ರ ಹಾಗೂ ಸೂಪರ್ ಸ್ಟಾರ್ ದಳಪತಿ ವಿಜಯ್ ಹೊಸ ರಾಜಕೀಯ ಪಕ್ಷ (ತಮಿಳಗ ವೆಟ್ರಿ ಕಳಗಂ) ಘೋಷಣೆ ಮಾಡುವ ಮೂಲಕ ಪ್ರಾದೇಶಿಕ ಪಕ್ಷಗಳೇ ವಿಜೃಂಭಿಸುತ್ತಿರುವ ತಮಿಳುನಾಡಿನಲ್ಲಿ ಮತ್ತೊಂದು ರಾಜಕೀಯ ಆಖಾಡವನ್ನು ಸಜ್ಜುಗೊಳಿಸಿದ್ದರು
ರಾಜಕೀಯ, ಸಿನಿಮಾ ರಂಗ ಒಂದಕ್ಕೊಂದು ಬಿಡಿಸಲಾಗದ ನಂಟು ಹೊಂದಿರುವ ತಮಿಳುನಾಡಿನಲ್ಲಿ ಸಿನಿಮಾ ಹಿನ್ನೆಲೆಯ ಮತ್ತೊಬ್ಬ ನಟ ದಳಪತಿ ವಿಜಯ್ ರಾಜಕಾರಣಕ್ಕೆ ಎಂಟ್ರಿ ಕೊಟ್ಟು ಇಂದಿಗೆ ಒಂದು ವರ್ಷ. ಖ್ಯಾತ ನಿರ್ದೇಶಕ ಎಸ್.ಎ. ಚಂದ್ರಶೇಖರ್ ಅವರ ಪುತ್ರ ಹಾಗೂ ಸೂಪರ್ ಸ್ಟಾರ್ ದಳಪತಿ ವಿಜಯ್ ಹೊಸ ರಾಜಕೀಯ ಪಕ್ಷ (ತಮಿಳಗ ವೆಟ್ರಿ ಕಳಗಂ) ಘೋಷಣೆ ಮಾಡುವ ಮೂಲಕ ಪ್ರಾದೇಶಿಕ ಪಕ್ಷಗಳೇ ವಿಜೃಂಭಿಸುತ್ತಿರುವ ತಮಿಳುನಾಡಿನಲ್ಲಿ ಮತ್ತೊಂದು ರಾಜಕೀಯ ಆಖಾಡವನ್ನು ಸಜ್ಜುಗೊಳಿಸಿದ್ದರು.
ಇದೀಗ ಪಕ್ಷ ಆರಂಭವಾಗಿ ಒಂದು ವರ್ಷ ಕಳೆದಿರುವ ಹಿನ್ನೆಲೆಯಲ್ಲಿ ಮೊದಲ ವಾರ್ಷಿಕೋತ್ಸವವನ್ನು ಆಯೋಜಿಸಲಾಗಿತ್ತು. ಜನ ಸೂರಜ್ ಪಕ್ಷದ ಸಂಸ್ಥಾಪಕ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರೊಂದಿಗೆ ವೇದಿಕೆ ಹಂಚಿಕೊಂಡರು. ಇದು ಎಲ್ಲರಲ್ಲಿ ಅಚ್ಚರಿಯನ್ನುಂಟು ಮಾಡಿತ್ತು. ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷ ಸಿದ್ಧತೆ ಮಾಡಿಕೊಳ್ಳುತ್ತಿರಬಹುದು ಎನ್ನುವ ಗುಸುಗುಸು ಶುರುವಾಗಿದೆ.
ಪಕ್ಷವು ಮಹಾಬಲಿಪುರಂನ ಹೋಟೆಲ್ನಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಪ್ರೀತಿ, ಕಾಳಜಿ ಮತ್ತು ನಿಸ್ವಾರ್ಥ ಸೇವೆಯ ತತ್ವಗಳ ಮೇಲೆ ಸ್ಥಾಪಿತವಾದ ಟಿವಿಕೆ, ಕಳೆದ ವರ್ಷದಿಂದ ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ