‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಚಿತ್ರ ಹಾಡಿ ಹೊಗಳಿದ ತನಿಷಾ

Updated on: Apr 21, 2026 | 8:31 AM

ನಟಿ ತನಿಷಾ ಕುಪ್ಪಂಡ ಅವರು ಬಿಗ್ ಬಾಸ್ ಬಳಿಕ ಸಾಕಷ್ಟು ಸಿನಿಮಾ ಆಫರ್ ಪಡೆದರು. ಈಗ ಅವರು ಬಣ್ಣದ ಲೋಕದಲ್ಲಿ ಮಿಂಚುತ್ತಿದ್ದಾರೆ. ಅವರು ‘ಶೇರ್’ ಸಿನಿಮಾದಲ್ಲಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಸಿನಿಮಾ ಏಕೆ ವಿಶೇಷ ಎಂಬುದನ್ನು ವಿವರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ತನಿಷಾ ಕುಪ್ಪಂಡ ಅವರು ಕಿರಣ್ ರಾಜ್ ನಟನೆಯ ‘ಶೇರ್’ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ನಡೆದಿದೆ. ಈ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತನಿಷಾ ಕುಪ್ಪಂಡ ಅವರು, ‘ಈ ಸಿನಿಮಾ ನನ್ನ ಕರಿಯರ್​​ಗೆ ಟ್ವಿಸ್ಟ್​ ಕೊಟ್ಟಿದೆ’ ಎಂದರು. ಅದಕ್ಕೆ ಕಾರಣವನ್ನೂ ನೀಡಿದರು. ಈಗಾಗಲೇ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More