ತನಿಷಾ ಜೊತೆ ಖುಷಿಖುಷಿಯಿಂದ ಮಾತನಾಡಿದ ವರ್ತೂರು ಸಂತೋಷ್ ತಾಯಿ

Updated on: Feb 05, 2024 | 8:12 AM

ವರ್ತೂರು ಸಂತೋಷ್ ಮನೆಯ ಕಾರ್ಯಕ್ರಮದಲ್ಲಿ ತನಿಷಾ ಕುಪ್ಪಂಡ, ತುಕಾಲಿ ಸಂತೋಷ್ ಸೇರಿ ಅನೇಕರು ಬಿಡುವು ಮಾಡಿಕೊಂಡು ಆಗಮಿಸಿದ್ದರು. ಈ ವೇಳೆ ತನಿಷಾ ಸಾಕಷ್ಟು ಹೈಲೈಟ್ ಆದರು. ವರ್ತೂರು ಸಂತೋಷ್ ತಾಯಿ ಜೊತೆ ತನಿಷಾ ಖುಷಿಖುಷಿಯಿಂದ ಮಾತನಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಪೂರ್ಣಗೊಂಡರೂ ಇದರ ಬಗ್ಗೆ ಚರ್ಚೆ ಇನ್ನೂ ನಿಂತಿಲ್ಲ. ಸ್ಪರ್ಧಿಗಳು ನಾನಾ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈಗ ವರ್ತೂರು ಸಂತೋಷ್ ಮನೆಯಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ತುಕಾಲಿ ಸಂತೋಷ್, ತನಿಷಾ ಕುಪ್ಪಂಡ ಸೇರಿ ಅನೇಕರು ಬಿಡುವು ಮಾಡಿಕೊಂಡು ಆಗಮಿಸಿದ್ದರು. ಈ ವೇಳೆ ತನಿಷಾ ಸಾಕಷ್ಟು ಹೈಲೈಟ್ ಆದರು. ವರ್ತೂರು ಸಂತೋಷ್ ತಾಯಿ ಜೊತೆ ತನಿಷಾ ಖುಷಿಖುಷಿಯಿಂದ ಮಾತನಾಡಿದ್ದಾರೆ. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ತನಿಷಾ ಹಾಗೂ ವರ್ತೂರು ಸಂತೋಷ್ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆದಿತ್ತು. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಆ ಬಾಂಡ್ ಮುಂದುವರಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More