AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ನಿರಾಶಾದಾಯಕ ಪಟ್ಟಿ’: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತನ್ವೀರ್ ಸೇಠ್ ತೀವ್ರ ಬೇಸರ

‘ಇದು ನಿರಾಶಾದಾಯಕ ಪಟ್ಟಿ’: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತನ್ವೀರ್ ಸೇಠ್ ತೀವ್ರ ಬೇಸರ

ರಾಮ್​, ಮೈಸೂರು
| Edited By: |

Updated on: Aug 03, 2026 | 1:59 PM

Share

ಸಚಿವ ಸ್ಥಾನ ಸಿಗದೇ ಹೋದದ್ದಕ್ಕೆ ಹಿರಿಯ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸಂಪುಟ ರಚನೆಯಾದ ಪಟ್ಟಿ ಆಶಾದಾಯಕವಲ್ಲ, ಬದಲಾಗಿ ನಿರಾಶಾದಾಯಕ ಎಂದಿದ್ದಾರೆ. ಮೈಸೂರು ಪ್ರಾಂತ್ಯಕ್ಕೆ ಅನ್ಯಾಯವಾಗಿದೆ ಎಂದಿರುವ ಅವರು, ಸದ್ಯಕ್ಕೆ ಪಕ್ಷಕ್ಕೆ ನಿಷ್ಠರಾಗಿರುವುದಾಗಿ ತಿಳಿಸಿದ್ದಾರೆ. ಕಾದು ನೋಡುವುದಾಗಿ ಹೇಳಿದ್ದಾರೆ

ಬೆಂಗಳೂರು, ಆಗಸ್ಟ್ 3: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಧಿಕೃತ ಘೋಷಣೆ ನಂತರ ಹಿರಿಯ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್, ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಪಟ್ಟಿಯನ್ನು ‘ಆಶಾದಾಯಕವಲ್ಲ, ನಿರಾಶಾದಾಯಕ ಪಟ್ಟಿ’ ಎಂದು ಬಣ್ಣಿಸಿದ್ದಾರೆ. ಸಚಿವ ಸಂಪುಟ ರಚನೆಯಲ್ಲಿ ಮೈಸೂರು ಪ್ರಾಂತ್ಯಕ್ಕೆ ಅನ್ಯಾಯವಾಗಿದೆ ಎಂಬ ಭಾವನೆ ವ್ಯಕ್ತಪಡಿಸಿರುವ ಸೇಠ್, ತಮ್ಮ ಬೆಂಬಲಿಗರ ಆಕ್ರೋಶ ಮತ್ತು ಪ್ರತಿಭಟನೆಯ ನಡುವೆಯೂ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಮುಂದುವರಿಯುವುದಾಗಿ ಹೇಳಿದ್ದಾರೆ.

ಇದೇ ವೇಳೆ, ಕೆಎನ್ ರಾಜಣ್ಣ ಅವರ ಉದಾಹರಣೆ ಮತ್ತು ಪಕ್ಷದೊಳಗಿನ ಇತರ ಚಟುವಟಿಕೆಗಳನ್ನು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ. ಸಚಿವ ಸ್ಥಾನ ವಂಚಿತರಾದ ಬಗ್ಗೆ ಈಗಲೇ ವಿಶ್ಲೇಷಣೆ ಮಾಡುವುದಿಲ್ಲ, ಸೂಕ್ತ ಸಮಯ ಬಂದಾಗ ಮಾತನಾಡುತ್ತೇನೆ ಎಂದಿದ್ದಾರೆ. ಸಂಪುಟದಲ್ಲಿ ಸ್ಥಾನ ಪಡೆದ ಎಲ್ಲ ಶಾಸಕರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಏತನ್ಮಧ್ಯೆ, ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕರಾಗಿರುವ ತನ್ವೀರ್ ಸೇಠ್ ಅವರ ಬೆಂಬಲಿಗರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us