ಅಂಬಾರಿ ಸರ್ಕಾರದಾಗಿದ್ರೂ, ಕಟ್ಟೋ ಹಗ್ಗ ರಾಜಮನೆತನದ್ದು; ಸಿಎಂಗೆ ಮಹತ್ವದ ಮನವಿ ಮಾಡಿಕೊಂಡ ತನ್ವೀರ್ ಸೇಠ್

Edited By:

Updated on: Oct 30, 2026 | 3:20 PM

ಮೈಸೂರು ದಸರಾ ಬಳಿಕ ರಾಜಮನೆತನ ಮತ್ತು ಸರ್ಕಾರದ ನಡುವೆ ಉಂಟಾಗಿರುವ ವಿವಾದಗಳ ಕುರಿತು ಮಾಜಿ ಸಚಿವ ತನ್ವೀರ್ ಸೇಠ್ ಪ್ರತಿಕ್ರಿಯಿಸಿದ್ದಾರೆ. ಅಂಬಾರಿ, ಅರಮನೆ ವಿಚಾರದಲ್ಲಿ ವಿವಾದಗಳು ಏಳದಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜಿಲ್ಲಾಡಳಿತ, ರಾಜಮನೆತನದೊಂದಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಅವರು ಸಲಹೆ ನೀಡಿದ್ದಾರೆ. ಸಂಬಂಧಗಳನ್ನು ಗಟ್ಟಿಗೊಳಿಸುವುದು ಅತ್ಯಗತ್ಯ ಎಂದಿದ್ದಾರೆ.

ಮೈಸೂರು, ಅ.30: ದಸರಾ ವಿಚಾರವಾಗಿ ಸರ್ಕಾರ ಹಾಗೂ ರಾಜಮನೆತನದ ನಡುವೆ ನಡೆಯುತ್ತಿರುವ ಜಗಳದ ಬಗ್ಗೆ ಮಾಜಿ ಸಚಿವ ತನ್ವೀರ್ ಸೇಠ್ ಮಾತನಾಡಿದ್ದಾರೆ. ದಸರಾ ಯಶಸ್ವಿಯಾಗಿ ಮುಕ್ತಾಯಗೊಂಡ ನಂತರ ಸಾಮಾನ್ಯವಾಗಿ ಚರ್ಚೆಗೆ ಬಾರದ ವಿಷಯಗಳ ಕುರಿತು ಈ ಬಾರಿ ವ್ಯಾಪಕ ಚರ್ಚೆ ನಡೆಯುತ್ತಿದೆ.  ಪ್ರಮೋದಾದೇವಿ ಒಡೆಯರ್ ಅವರು ಬರೆದಿರುವ ಪತ್ರ ಮತ್ತು ಯತೀಂದ್ರ ಸಿದ್ಧರಾಮಯ್ಯ ನೀಡಿರುವ ಹೇಳಿಕೆಗಳು ಸರ್ಕಾರ ಮತ್ತು ರಾಜಮನೆತನದ ನಡುವೆ “ನಾನು ಮೇಲು, ನೀನು ಮೇಲು” ಎಂಬ ಪೈಪೋಟಿಗೆ ಕಾರಣವಾಗಿವೆ ಎಂದು ಮಾಜಿ ಸಚಿವ ತನ್ವೀರ್ ಸೇಠ್ ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವ ತನ್ವೀರ್ ಸೇಠ್, ಜಿಲ್ಲಾಡಳಿತ, ರಾಜಮನೆತನ ಮತ್ತು ಸಂಬಂಧಪಟ್ಟ ಇಲಾಖೆಗಳನ್ನು ಒಳಗೊಂಡಂತೆ ಪ್ರತ್ಯೇಕ ಸಭೆ ನಡೆಸುವಂತೆ ಆಗ್ರಹಿಸಿದ್ದಾರೆ. ಅಂಬಾರಿ ರಾಜ್ಯ ಸರ್ಕಾರದ ಅಧೀನದಲ್ಲಿದ್ದರೂ, ಅದರ ಜೋಡಣೆಗೆ ಬೇಕಾದ ಹಗ್ಗ ರಾಜಮನೆತನದ ಬಳಿ ಇರುವುದು ಸಂಬಂಧಗಳ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತದೆ ಎಂದರು. ಮೈಸೂರು ಮಹಾರಾಜರ ಕೊಡುಗೆ ಅಪಾರವಾಗಿದ್ದು, ಆ ಗೌರವವನ್ನು ಕಾಪಾಡಿಕೊಳ್ಳಬೇಕು. ಅಂಬಾರಿ ನಮ್ಮದು ಎಂಬ ರಾಜಮನೆತನದ ಹೇಳಿಕೆ, ಹಾಗೂ ಅರಮನೆ ಸರ್ಕಾರದ ಆಸ್ತಿ ಎಂಬ ಚರ್ಚೆ ಇತ್ಯಾದಿಗಳ ಬಗ್ಗೆ ಸ್ಪಷ್ಟತೆಗಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಸಭೆ ನಡೆಸುವಂತೆ ಅವರು ಸಲಹೆ ನೀಡಿದ್ದಾರೆ. ಅರಮನೆ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿರುವುದರಿಂದ ಹೆಚ್ಚಿನ ಚರ್ಚೆಗೆ ನಾನು ಸಮರ್ಥನಲ್ಲ ಎಂದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 30, 2026 03:16 PM
Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More