ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 

Edited By:

Updated on: Oct 10, 2026 | 9:38 AM

ನಿರ್ದೇಶಕ ತರುಣ್ ಸುಧೀರ್ ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕಾಟೇರ ಯಶಸ್ಸಿನ ನಂತರ ನಿರ್ದೇಶನದಿಂದ ದೂರ ಉಳಿದಿರುವುದಕ್ಕೆ ಕಾರಣಗಳನ್ನು ಅವರು ಹಂಚಿಕೊಂಡಿದ್ದಾರೆ. ದರ್ಶನ್ ಅವರೊಂದಿಗೆ ಯೋಜಿಸಿದ್ದ ಸಿಂಧೂರ ಲಕ್ಷ್ಮಣ ಸಿನಿಮಾ ಮುಂದಕ್ಕೆ ಹೋಗಿದ್ದು, ಹೊಸ ಸ್ಕ್ರಿಪ್ಟ್ ಬರೆಯುವಲ್ಲಿ ನಿರತರಾಗಿದ್ದಾರೆ. ಶೀಘ್ರದಲ್ಲೇ ತಮ್ಮ ಮುಂದಿನ ಯೋಜನೆಯನ್ನು ಪ್ರಕಟಿಸುವುದಾಗಿ ತರುಣ್ ಸುಧೀರ್ ತಿಳಿಸಿದ್ದಾರೆ.

ಸ್ಯಾಂಡಲ್​ವುಡ್​ನ ಯಶಸ್ವಿ ನಿರ್ದೇಶಕ ತರುಣ್ ಸುಧೀರ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಕಾಟೇರ ಸಿನಿಮಾದ ಭಾರಿ ಯಶಸ್ಸಿನ ನಂತರ ತರುಣ್ ಸುಧೀರ್ ಅವರು ಯಾವುದೇ ಹೊಸ ಚಿತ್ರಕ್ಕೆ ನಿರ್ದೇಶನ ಮಾಡದಿರುವುದು ಸಿನಿರಸಿಕರಲ್ಲಿ ಕುತೂಹಲ ಮೂಡಿಸಿತ್ತು. ಈ ಕುರಿತು ಮಾತನಾಡಿದ ಅವರು, ಕಾಟೇರ ತೆರೆಕಂಡ ನಂತರ ವೈಯಕ್ತಿಕ ಕಾರ್ಯಕ್ರಮ ಹಾಗೂ ದರ್ಶನ್ ಅವರೊಂದಿಗೆ ಯೋಜಿಸಿದ್ದ ಸಿಂಧೂರ ಲಕ್ಷ್ಮಣ ಸಿನಿಮಾದ ಸಿದ್ಧತೆಗಳಲ್ಲಿ ನಿರತರಾಗಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ ಆ ಯೋಜನೆ ಮುಂದೂಡಲ್ಪಟ್ಟಿತು ಎಂದು ವಿವರಿಸಿದರು. ಪತ್ನಿ ಕಡೆಯಿಂದ ಸಿಕ್ಕ ಉಡುಗೊರೆ ಬಗ್ಗೆ ಮಾತನಾಡಿದ ಅವರು, ವರ್ಷವಿಡೀ ಅವಳು ಏನಾದರೂ ಉಡುಗೊರೆ ಕೊಡುತ್ತಲೇ ಇರುತ್ತಾಳೆ. ಈಗಲೂ ಸರ್​​ಪ್ರೈಸ್ ಕೇಕ್ ಕಟ್ಟಿಂಗ್ ಎಲ್ಲವೂ ಇತ್ತು ಎಂದು ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More