ವಿದ್ಯುತ್ ವಿತರಣೆ ಪರವಾನಗಿಗೆ ಟಾಟಾ ಅರ್ಜಿ: ಕರೆಂಟ್ ಖಾಸಗೀಕರಣಕ್ಕೆ ವಿರೋಧ, ಬೆಸ್ಕಾಂ ಆಕ್ಷೇಪ

Updated on: Jun 24, 2026 | 2:41 PM

ಮುಖ್ಯಾಂಶಗಳು

  • ಕರ್ನಾಟಕದ ಆರು ಜಿಲ್ಲೆಗಳಲ್ಲಿ ವಿದ್ಯುತ್ ವಿತರಣೆಗೆ ಟಾಟಾ ಅರ್ಜಿ
  • ಬೆಸ್ಕಾಂ, ಹೆಸ್ಕಾಂ, ಚೆಸ್ಕಾಂ, ಮೆಸ್ಕಾಂ ಸೇರಿ ಎಸ್ಕಾಂಗಳಿಂದ ವಿರೋಧ
  • ಸರ್ಕಾರಿ ಸ್ವಾಮ್ಯದ ಎಸ್ಕಾಂಗಳಿಗೆ ನಷ್ಟವಾಗಲಿದೆ ಎಂದ ಬೆಸ್ಕಾಂ

ಟಾಟಾ ಪವರ್ ಕಂಪನಿ ಲಿಮಿಟೆಡ್ ಕರ್ನಾಟಕದ 19 ಜಿಲ್ಲೆಗಳಲ್ಲಿ ವಿದ್ಯುತ್ ವಿತರಣೆಗೆ ಪರವಾನಿಗೆ ಕೋರಿ ಅರ್ಜಿ ಸಲ್ಲಿಸಿದೆ. ಆದರೆ, ಬೆಸ್ಕಾಂ ಸೇರಿದಂತೆ ರಾಜ್ಯದ ಎಸ್ಕಾಂಗಳು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಖಾಸಗಿ ಕಂಪನಿಗಳು ಲಾಭದಾಯಕ ಗ್ರಾಹಕರನ್ನು ಮಾತ್ರ ಆಕರ್ಷಿಸುವುದರಿಂದ, ಸಾಮಾನ್ಯ ಗ್ರಾಹಕರ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಬೀಳಲಿದೆ ಎಂಬುದು ಎಸ್ಕಾಂಗಳ ವಾದವಾಗಿದೆ.

ಬೆಂಗಳೂರು, ಜೂನ್ 24: ಕರ್ನಾಟಕದಲ್ಲಿ ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಟಾಟಾ ಪವರ್ ಕಂಪನಿ ಲಿಮಿಟೆಡ್ ರಾಜ್ಯದ 19 ಜಿಲ್ಲೆಗಳಲ್ಲಿ ವಿದ್ಯುತ್ ವಿತರಣೆ ಪರವಾನಿಗೆಗಾಗಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ)ಕ್ಕೆ ಅರ್ಜಿ ಸಲ್ಲಿಸಿದೆ. ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಆರು ಜಿಲ್ಲೆಗಳಲ್ಲಿ ವಿದ್ಯುತ್ ವಿತರಣೆಗೆ ಅವಕಾಶ ಕೋರಿ ಟಾಟಾ ಸಂಸ್ಥೆ ಅರ್ಜಿ ಸಲ್ಲಿಸಿದೆ.

ಆದರೆ, ಈ ಪ್ರಸ್ತಾವನೆಗೆ ರಾಜ್ಯದ ಬೆಸ್ಕಾಂ, ಹೆಸ್ಕಾಂ, ಚೆಸ್ಕಾಂ, ಮೆಸ್ಕಾಂ ಸೇರಿದಂತೆ ಐದು ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಟಾಟಾ ಪವರ್‌ನಂತಹ ಖಾಸಗಿ ಸಂಸ್ಥೆಗಳು ಕೇವಲ ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಂತಹ ಲಾಭದಾಯಕ ಗ್ರಾಹಕರನ್ನು ಮಾತ್ರ ಆಕರ್ಷಿಸುತ್ತವೆ. ಇದರಿಂದ ಸರ್ಕಾರಿ ಸ್ವಾಮ್ಯದ ಎಸ್ಕಾಂಗಳ ಪ್ರಮುಖ ಆದಾಯದ ಮೂಲ ಕಡಿತಗೊಳ್ಳುತ್ತದೆ ಎಂದು ಬೆಸ್ಕಾಂ ಹೇಳಿದೆ. ಖಾಸಗಿ ಕಂಪನಿಗಳಿಗೆ ಪರವಾನಿಗೆ ನೀಡುವುದರಿಂದ ಎಸ್ಕಾಂಗಳಿಗೆ ನಷ್ಟವಾಗಲಿದ್ದು, ಅಂತಿಮವಾಗಿ ಸಾಮಾನ್ಯ ಗ್ರಾಹಕರು, ಬಡವರು ಮತ್ತು ರೈತರ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಬೀಳಲಿದೆ ಎಂದು ಎಸ್ಕಾಂಗಳು ವಾದಿಸಿವೆ. ಕೆಇಆರ್‌ಸಿ ಸದ್ಯಕ್ಕೆ ಈ ಅರ್ಜಿ ಕುರಿತು ಸಾರ್ವಜನಿಕ ಅಹವಾಲು ಮತ್ತು ಆಕ್ಷೇಪಣೆಗಳನ್ನು ಆಲಿಸುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 24, 2026 01:57 PM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More