ಟ್ಯಾಟೂ ಪ್ರಿಯರಿಗೆ ಶಾಕ್: ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ

Edited By:

Updated on: Aug 12, 2026 | 1:09 PM

ಯುವಜನತೆಯಲ್ಲಿ ಟ್ಯಾಟೂ ಕ್ರೇಜ್ ಹೆಚ್ಚಿದ್ದರೂ, ಅಸುರಕ್ಷಿತ ವಿಧಾನಗಳು ಮತ್ತು ರಾಸಾಯನಿಕಯುಕ್ತ ಶಾಯಿಗಳಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಎಚ್‌ಐವಿ, ಹೆಪಟೈಟಿಸ್, ಚರ್ಮದ ಕ್ಯಾನ್ಸರ್ ಮತ್ತು ಅಲರ್ಜಿಗಳಂತಹ ಮಾರಣಾಂತಿಕ ರೋಗಗಳು ಹರಡುತ್ತಿವೆ. ಈ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಮತ್ತು ಡ್ರಗ್ ಕಂಟ್ರೋಲ್ ಬೋರ್ಡ್ ಟ್ಯಾಟೂ ಪಾರ್ಲರ್‌ಗಳು ಮತ್ತು ಇಂಕ್ ಬಳಕೆಯನ್ನು ನಿಯಂತ್ರಿಸಲು ಹೊಸ ಕಾನೂನು ಮತ್ತು ಮಾರ್ಗಸೂಚಿಗಳನ್ನು ತರಲು ಮುಂದಾಗಿವೆ. ಟ್ಯಾಟೂ ತಯಾರಕರಿಗೆ ಮತ್ತು ಕಲಾವಿದರಿಗೆ ಸೂಕ್ತ ಮಾನದಂಡಗಳ ಅಗತ್ಯವಿದೆ.

ಬೆಂಗಳೂರು, ಆ.12: ಯುವಜನತೆಯಲ್ಲಿ ಟ್ಯಾಟೂ (Tattoo) ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮತ್ತೊಂದೆಡೆ ಅಸುರಕ್ಷಿತ ಹಾಗೂ ರಾಸಾಯನಿಕಯುಕ್ತ ಟ್ಯಾಟೂಗಳಿಂದ ಗಂಭೀರ ಆರೋಗ್ಯ ಸಮಸ್ಯೆಗಳು ತಲೆದೋರುತ್ತಿವೆ. ಹೀಗಾಗಿ ರಾಜ್ಯದಲ್ಲಿ ಮತ್ತು ದೇಶಾದ್ಯಂತ ಟ್ಯಾಟೂ ಪಾರ್ಲರ್‌ಗಳು ಹಾಗೂ ಕೆಮಿಕಲ್‌ ಬಳಕೆಯ ಮೇಲೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಹಾಗೂ ಡ್ರಗ್ ಕಂಟ್ರೋಲ್ ಬೋರ್ಡ್ ಹೊಸ ಕಾನೂನು ಮತ್ತು ಮಾರ್ಗಸೂಚಿ ತರಲು ಮುಂದಾಗಿದೆ. ಟ್ಯಾಟೂ ಹಾಕಿಸಿಕೊಳ್ಳುವಾಗ ಅನುಸರಿಸುವ ಅಶುಚಿತ್ವ ಹಾಗೂ ಅಪಾಯಕಾರಿ ಕೆಮಿಕಲ್‌ಗಳ ಬಳಕೆಯಿಂದಾಗಿ ಹಲವು ಮಾರಣಾಂತಿಕ ರೋಗಗಳು ಹರಡುತ್ತಿರುವುದು ತಜ್ಞರ ಪರಿಶೀಲನೆಯಲ್ಲಿ ತಿಳಿದುಬಂದಿದೆ. ಒಂದೇ ಸೂಜಿ ಅಥವಾ ಸರಿಪಡಿಸದ ಉಪಕರಣಗಳ ಬಳಕೆಯಿಂದ ಎಚ್‌ಐವಿ, ಹೆಪಟೈಟಿಸ್ ಬಿ, ಹೆಪಟೈಟಿಸ್ ಸಿ ಹಾಗೂ ಸ್ಟ್ಯಾಫಿಲೋಕೊಕಸ್ ಔರೆಸ್‌ನಂತಹ ಬ್ಯಾಕ್ಟೀರಿಯಾ ಸೋಂಕುಗಳು ಹರಡುತ್ತಿವೆ. ಟ್ಯಾಟೂ ಶಾಯಿಯಲ್ಲಿರುವ ಕನ್ಸ್ಟ್ರಕ್ಷನ್ ಕೆಮಿಕಲ್ಸ್ ಹಾಗೂ ಭಾರಲೋಹಗಳಿಂದ ಚರ್ಮದ ಕ್ಯಾನ್ಸರ್, ಅಲರ್ಜಿ ಹಾಗೂ ವಿವಿಧ ಚರ್ಮರೋಗಗಳು ಕಾಣಿಸಿಕೊಳ್ಳುತ್ತಿವೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಹಾಗೂ ಔಷಧ ನಿಯಂತ್ರಣ ಇಲಾಖೆಯ ಆಯುಕ್ತ ಶ್ರೀನಿವಾಸ್ ಅವರು ನೀಡಿರುವ ಹೇಳಿಕೆ ಪ್ರಕಾರ “ನಾವು ಮಾರುಕಟ್ಟೆಯಲ್ಲಿ ಲಭ್ಯವಿರುವ ಟ್ಯಾಟೂ ಇಂಕ್ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಅತಿಯಾದ ಕೆಮಿಕಲ್ಸ್ ಹಾಗೂ ಸೀಸ, ಕ್ರೋಮಿಯಂನಂತಹ ಅಪಾಯಕಾರಿ ಮೆಟಲ್ ಅಂಶಗಳು ಪತ್ತೆಯಾಗಿವೆ. ದೇಶದಲ್ಲಿ ಟ್ಯಾಟೂಗೆ ಯಾವುದೇ ನಿರ್ದಿಷ್ಟ ನಿಯಂತ್ರಣ ಕಾನೂನುಗಳಿರಲಿಲ್ಲ. ಹೀಗಾಗಿ ಈ ಬಗ್ಗೆ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಟ್ಯಾಟೂ ತಯಾರಕರಿಗೆ ಹಾಗೂ ಹಾಕುವವರಿಗೂ ಸೂಕ್ತ ಮಾನದಂಡಗಳು ಅತಿ ಅಗತ್ಯವಿದೆ.” ಎಂದು ಹೇಳಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More