ಬೈಯ್ಯುವವರಿಗೂ ಸ್ವಾಗತ, ಹೊಗಳುವವರಿಗೂ ಸ್ವಾಗತ ಎಂದು ಪ್ರತಾಪ್ ಸಿಂಹಗೆ ಹೇಳಿದ ಸಿದ್ದರಾಮಯ್ಯ

Edited By:

Updated on: Aug 28, 2023 | 2:42 PM

KDP Meeting: ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಮಹದೇವಪ್ಪ, ಶಾಸಕ ತನ್ವೀರ್ ಸೇಠ್, ಸಂಸದ ಪ್ರತಾಪ್ ಸಿಂಹ ನಡುವೆ ಸಭೆಯ ಆರಂಭದಲ್ಲಿ ಮಾತುಕತೆ ನಡೆಯಿತು. ಈ ವೇಳೆ ಸಂಸದ ಪ್ರತಾಪ್ ಸಿಂಹ ಅವರಿಗೆ ಬಯ್ಯುವವರಿಗೂ ಸ್ವಾಗತ ಹೊಗಳುವವರಿಗೂ ಸ್ವಾಗತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರು, ಆ.28: ಮೈಸೂರಿನಲ್ಲಿ ನಡೆದ ಕೆಡಿಪಿ ಸಭೆಯ(KDP Meeting) ಆರಂಭದಲ್ಲಿ ಸ್ವಾರಸ್ಯಕರ ಘಟನೆ ನಡೆದಿದೆ. ನಮ್ಮ ಬಗ್ಗೆ ಬೈಯ್ಯುವವರಿಗೂ ಸ್ವಾಗತ, ಹೊಗಳುವವರಿಗೂ ಸ್ವಾಗತ ಎಂದು ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹಗೆ(Pratap Simha) ಸಿಎಂ ಸಿದ್ದರಾಮಯ್ಯ(Siddaramaiah) ಸ್ವಾರಸ್ಯಕರವಾಗಿ ಸ್ವಾಗತಿಸಿದರು. ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ, ಶಾಸಕ ತನ್ವೀರ್ ಸೇಠ್, ಸಂಸದ ಪ್ರತಾಪ್ ಸಿಂಹ ನಡುವೆ ಸಭೆಯ ಆರಂಭದಲ್ಲಿ ಮಾತುಕತೆ ನಡೆಯಿತು. ಈ ವೇಳೆ ಸಂಸದ ಪ್ರತಾಪ್ ಸಿಂಹಗೆ ಬಯ್ಯುವವರಿಗೂ ಸ್ವಾಗತ ಹೊಗಳುವವರಿಗೂ ಸ್ವಾಗತ ಎಂದು ಸಿದ್ದರಾಮಯ್ಯ ಹೇಳಿದರು.

ಮೈಸೂರು ಜಿ.ಪಂ. ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ H.C.ಮಹದೇವಪ್ಪ, ಸಂಸದ ಪ್ರತಾಪ ಸಿಂಹ, ಶಾಸಕರಾದ ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಜಿ.ಡಿ.ಹರೀಶ್ ಗೌಡ, ಶ್ರೀವತ್ಸ, ದರ್ಶನ್ ಧ್ರುವನಾರಾಯಣ್, ರವಿಶಂಕರ್, ಎಂಎಲ್​ಸಿಗಳಾದ ವಿಶ್ವನಾಥ್, ಮರಿತಿಬ್ಬೇಗೌಡ, ಮಂಜೇಗೌಡ, ತಿಮ್ಮಯ್ಯ, ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿ ಅಧಿಕಾರಿಗಳು ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More