ತೆರಿಗೆ ಬಾಕಿ‌: ಮಂತ್ರಿಮಾಲ್​ಗೆ ಬಿಬಿಎಂಪಿ ಬೀಗ
ಮಂತ್ರಿ ಮಾಲ್​ಗೆ ಬೀಗ

ತೆರಿಗೆ ಬಾಕಿ‌: ಮಂತ್ರಿಮಾಲ್​ಗೆ ಬಿಬಿಎಂಪಿ ಬೀಗ

ವಿವೇಕ ಬಿರಾದಾರ

Updated on: May 10, 2024 | 10:53 AM

ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಮಂತ್ರಿಮಾಲ್​ಗೆ ಬಿಬಿಎಂಪಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಬೀಗ ಹಾಕಿದ್ದಾರೆ. ಈ ಹಿಂದೆ ಕೂಡ ಹಲವು ಬಾರೀ ಪಾಲಿಕೆ ಬೀಗ ಹಾಕಿತ್ತು. ಎಷ್ಟೇ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಮಾಲ್​ಗೆ ಬಿಬಿಎಂಪಿ ಅಧಿಕಾರಿಗಳು ಈ ಬಾರಿ ಬಿಸಿ ಮುಟ್ಟಿಸಿದ್ದಾರೆ.

ಬೆಂಗಳೂರು ನಗರದ ಪ್ರತಿಷ್ಠಿತ ಮಾಲ್​ಗಳಲ್ಲಿ ಒಂದಾದ ಮಂತ್ರಿ ಮಾಲ್ ತೆರಿಗೆ ಕಟ್ಟುವ ವಿಚಾರವಾಗಿ​ ಪದೇ ಪದೇ ಬಿಬಿಎಂಪಿಯಿಂದ ತಿವಿಸಿಕೊಳ್ಳುತ್ತಿದೆ. ಇದೀಗ ಮತ್ತೆ ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಮಂತ್ರಿಮಾಲ್​ಗೆ ಬಿಬಿಎಂಪಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಬೀಗ ಹಾಕಿದ್ದಾರೆ. ಈ ಹಿಂದೆ ಕೂಡ ಹಲವು ಬಾರೀ ಪಾಲಿಕೆ ಬೀಗ ಹಾಕಿತ್ತು. ಎಷ್ಟೇ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಮಾಲ್​ಗೆ ಬಿಬಿಎಂಪಿ ಅಧಿಕಾರಿಗಳು ಈ ಬಾರಿ ಬಿಸಿ ಮುಟ್ಟಿಸಿದ್ದಾರೆ. ಸುಮಾರು 50 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಂತ್ರಿ ಮಾಲ್​ನ ಲೈಸೆನ್ಸ್ ಅಮಾನತುಗೊಳಿಸಲಾಗಿದೆ ಅಂತ ಬೋರ್ಡ್ ಹಾಕಿ, ಪಾಲಿಕೆ ಅಧಿಕಾರಿಗಳು ಸೀಜ್ ಮಾಡಿ ತೆರಳಿದ್ದಾರೆ.

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.