ನಮ್ಮ ಮೆಟ್ರೋ: ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಹೊರಬಂದ ತುಂಗಾ ಟಿಬಿಎಂ
ನಮ್ಮ ಮೆಟ್ರೋದ ಪಿಂಕ್ ಲೈನ್ ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ರೈಲು ಸಂಪರ್ಕ ಕಾಮಗಾರಿ ನಡೆಯುತ್ತಿದೆ. ನಾಗವಾರ ನಿಲ್ದಾಣದ ಕಟ್ ಮತ್ತು ಕವರ್ ಶಾಫ್ಟ್‌ನಲ್ಲಿ ತುಂಗಾ-ಟಿಬಿಎಂ ಇಂದು (ಸೆ.04) ಪೂರ್ಣ ಸುರಂಗ ಕೊರೆದು ಹೊರಬಂದಿದೆ.
ಬೆಂಗಳೂರು, ಸೆಪ್ಟೆಂಬರ್ 04: ನಮ್ಮ ಮೆಟ್ರೋದ (Namma Metro) ಪಿಂಕ್ ಲೈನ್ ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ರೈಲು ಸಂಪರ್ಕ ಕಾಮಗಾರಿ ನಡೆಯುತ್ತಿದೆ. ನಾಗವಾರ ನಿಲ್ದಾಣದ ಕಟ್ ಮತ್ತು ಕವರ್ ಶಾಫ್ಟ್‌ನಲ್ಲಿ ತುಂಗಾ-ಟಿಬಿಎಂ (Tunga TBM) ಇಂದು (ಸೆ.04) ಪೂರ್ಣ ಸುರಂಗ ಕೊರೆದು ಹೊರಬಂದಿದೆ. ಸುರಂಗ ಕೊರೆಯುವ ಯಂತ್ರ ತುಂಗಾ (ಟಿಬಿಎಂ) ಬುಧವಾರ ಸೌತ್ ಕಟ್ ಮತ್ತು ಕವರ್ ಶಾಫ್ಟ್ ನಲ್ಲಿ 936.6 ಮೀ ಸುರಂಗ ಕೊರೆಯುವ ಕಾಮಗಾರಿ ಪೂರ್ಣಗೊಳಿಸಿ ಹೊರಬಂದಿದೆ. ಈ ಸುರಂಗ ಕೊರೆಯುವ ಯಂತ್ರ ಕಾಡುಗೊಂಡನಹಳ್ಳಿ ನಿಲ್ದಾಣದಲ್ಲಿ ಇದೇ ವರ್ಷ ಫೆ.02 ರಂದು ಕಾಮಗಾರಿ ಪ್ರಾರಂಭಮಾಡಿದ್ದು ನಾಗವಾರ ನಿಲ್ದಾಣದ ಸೌತ್ ಕಟ್ ಮತ್ತು ಕವರ್ ಶಾಫ್ಟ್‌ನಲ್ಲಿ ಪೂರ್ಣಗೊಳಿಸಿದೆ.
ಈ ಪ್ರಗತಿಯೊಂದಿಗೆ, ಒಟ್ಟು 20992 ಮೀ ಸುರಂಗ ಮಾರ್ಗದಲ್ಲಿ 20582.7 ಮೀ ಅಂದರೆ ಶೇ 98%. ಪೂರ್ಣಗೊಂಡಿದೆ. ಒಟ್ಟಾರೆ ರೀಚ್-6ರ ಸುರಂಗ ಮಾರ್ಗಕ್ಕಾಗಿ ನಿಯೋಜಿಸಲಾದ 9 ಟಿಬಿಎಂಗಳಲ್ಲಿ ಇಲ್ಲಿಯವರೆಗೆ 8 ಟಿಬಿಎಂಗಳು ಸುರಂಗಮಾರ್ಗದ ಕಾಮಗಾರಿಯನ್ನು ಪೂರ್ಣಗೊಳಿಸಿದೆ.
ಇದನ್ನೂ ಓದಿ: ಬೆಂಗಳೂರು ಸುರಂಗ ಮಾರ್ಗ, ಯೋಜನಾ ವರದಿಗೇ ಬೇಕು ಬರೋಬ್ಬರಿ 9.45 ಕೋಟಿ ರೂ!
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ