ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದ ಎಸ್​​​ಪಿ

Edited By:

Updated on: Dec 20, 2025 | 5:55 PM

ಬಾಗಲಕೋಟೆಯ ದಿವ್ಯಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಶಿಕ್ಷಕ ದಂಪತಿಯು 16 ವರ್ಷದ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಪೋಷಕರ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿದಿದೆ ಎಂದು ಎಸ್‌ಪಿ ಸಿದ್ಧಾರ್ಥ್ ಗೋಯಲ್ ತಿಳಿಸಿದ್ದಾರೆ.

ಬಾಗಲಕೋಟೆ, ಡಿಸೆಂಬರ್​ 20: ನಗರದಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್​ಪಿ ಸಿದ್ದಾರ್ಥ ಗೋಯಲ್‌ ಪ್ರತಿಕ್ರಿಯಿಸಿದ್ದು, ಬಾಗಲಕೋಟೆಯಲ್ಲಿ ದಿವ್ಯಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ಶಾಲೆ ಇದೆ. ಅಕ್ಷಯ್ ಇಂದುಲ್ಕರ್ ಹಾಗೂ ಆನಂದಿ ದಂಪತಿ ಶಾಲೆ‌ ನಡೆಸುತ್ತಾರೆ. ಬಾಲಕನ‌ ಮೇಲೆ‌ ಹಲ್ಲೆ ಮಾಡುವ ದೃಶ್ಯ ಸಿಕ್ಕಿದೆ. ಮೂರು ತಿಂಗಳ ಹಿಂದೆ ನಡೆದ ಘಟನೆ ಇದು. ಮೊದಲು ಆ ಶಾಲೆಯಲ್ಲಿ ಓರ್ವ ಮಹಿಳೆ ಕೆಲಸ ಮಾಡುತ್ತಿದ್ದರು, ಅವರನ್ನು ‌ಕೆಲಸದಿಂದ ತೆಗೆದ ಮೇಲೆ ವಿಡಿಯೋ ಬಹಿರಂಗಪಡಿಸಿದ್ದಾರೆ. ಬಾಲಕನ ತಂದೆ, ತಾಯಿ ನವನಗರ ಠಾಣೆಗೆ ದೂರು ನೀಡಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.