Loading video

ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ

| Updated By: ರಮೇಶ್ ಬಿ. ಜವಳಗೇರಾ

Updated on: Dec 29, 2024 | 11:44 AM

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ವಿಮಾನದಲ್ಲಿ ಹೋಗಿದ್ದಾರೆ. ಶೈಕ್ಷಣಿಕ ಪ್ರವಾಸದ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ಹ್ಯಾಟಿ ಸರ್ಕಾರಿ ಶಾಲೆಯ ಮಕ್ಕಳು ವಿಮಾನದಲ್ಲಿ ಹೈದರಾಬಾದ್ ತೆರಳಿದ್ದಾರೆ. ಇನ್ನು ತಾವು ವಿಮಾನ ಏರದ ಪೋಷಕರು ತಮ್ಮ ಮಕ್ಕಳಿಗೆ ವಿಮಾನದಲ್ಲಿ ಕಳುಹಿಸಿಕೊಟ್ಟಿದ್ದಾರೆ. ಇನ್ನು ಮೊದಲ ಬಾರಿಗೆ ವಿಮಾನ ಏರಿದ ವಿದ್ಯಾರ್ಥಿಗಳು ಫುಲ್ ಖುಷ್ ಆಗಿದ್ದಾರೆ.

ಕೊಪ್ಪಳ, (ಡಿಸೆಂಬರ್ 29): ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ ಒಲಿದು ಬಂದಿದೆ. ಶೈಕ್ಷಣಿಕ ಪ್ರವಾಸದ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ಹ್ಯಾಟಿ ಸರ್ಕಾರಿ ಶಾಲೆಯ ಮಕ್ಕಳು ವಿಮಾನದಲ್ಲಿ ಹೈದರಾಬಾದ್ ತೆರಳಿದ್ದಾರೆ. ಬಳ್ಳಾರಿ ಜಿಲ್ಲೆಯ ಜಿಂದಾಲ್ ಏರ್ಪೋರ್ಟ್ ನಿಂದ ಹೈದರಾಬಾದ್ ಗೆ ಪ್ರಯಾಣ ಬೆಳೆಸಿರುವ ವಿದ್ಯಾರ್ಥಿಗಳು , ಹುಸೇನ್ ಸಾಗರ್, ಗೋಲ್ಕೊಂಡ್ ಕೋಟೆ ಸೇರಿ ಹಲವು ಪ್ರವಾಸಿ ತಾಣ ವಿಕ್ಷಿಸಲಿದ್ದಾರೆ. ಇನ್ನು ಮಕ್ಕಳು ವಿಮಾನ ಪ್ರಯಾಣಕ್ಕೆ ಪೋಷಕರು ಬೈ ಬೈ ಹೇಳಿದರು.