Caste census: 5 ದಿನಗಳಲ್ಲಿ ಜಾತಿ ಗಣತಿ ಮುಗಿಸಿದ ಶಿಕ್ಷಕಿ!

Edited By:

Updated on: Sep 29, 2025 | 3:12 PM

ಜಾತಿ ಗಣತಿ ಹಿನ್ನಲೆ ತನಗೆ ವಹಿಸಿದ್ದ ಮನೆಗಳ ಸಮೀಕ್ಷೆಯನ್ನ ಕೆವಲ 5 ದಿನಗಳಲ್ಲಿ ಮುಗಿಸುವ ಮೂಲಕ ಶಿಕ್ಷಕಿಯೋರ್ವರು ಗಮನ ಸೆಳೆದಿದ್ದಾರೆ. ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ದಾಸರ್ಲಹಳ್ಳಿಯಲ್ಲಿ ಗಣತಿ ಮಾಡಿದ್ದ ಶಿಕ್ಷಕಿ ಎಂ.ರಾಧಾ, ಆ ಗ್ರಾಮದಲ್ಲೇ ಉಳಿದುಕೊಂಡಿದ್ದರು. ಅಲ್ಲದೆ ಜನರು ಕೆಲಸಕ್ಕೆ ಹೋಗುವ ಮುನ್ನ ಮನೆಗೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದರು.

ಚಿತ್ರದುರ್ಗ, ಸೆಪ್ಟೆಂಬರ್​ 29: ಕರ್ನಾಟಕ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (Caste census) ಗಣತಿದಾರರಿಗೆ ದೊಡ್ಡ ತಲೆನೋವಾಗಿ ಮಾರ್ಪಟ್ಟಿರುವ ಬಗ್ಗೆ ಸಾಕಷ್ಟು ಮಾತುಗಳು ಕೇಳಿ ಬಂದಿದ್ದವು. ಆದ್ರೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ದಾಸರ್ಲಹಳ್ಳಿಯಲ್ಲಿ ಶಿಕ್ಷಕಿಯೋರ್ವರು ಕೇವಲ 5 ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಗ್ರಾಮದ ಜನರು ಕೆಲಸಕ್ಕೆ ಹೋಗುವ ಮುನ್ನ ಮನೆಗೆ ಭೇಟಿ ನೀಡುತ್ತಿದ್ದ ಶಿಕ್ಷಕಿ ಎಂ.ರಾಧಾ, ಗ್ರಾಮದಲ್ಲೇ ಉಳಿದುಕೊಂಡು ಸಮೀಕ್ಷೆ ಕಾರ್ಯ ಮುಗಿಸಿದ್ದಾರೆ. ರಾಧಾ ಕಾರ್ಯಕ್ಕೆ ದಾಸರ್ಲಹಳ್ಳಿ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 29, 2025 03:08 PM
Loading...
Unable to load recommendations.
Follow Us
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More